ಬೆಂ.ಗ್ರಾ.ಜಿಲ್ಲೆ: ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: 2021ನೇ ಸಾಲಿನ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿ ಆಫ್ ಇಂಡಿಯಾ ರವರನ್ನು ಆಯ್ಕೆ ಮಾಡಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬೆಳೆದ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ ಅವರು ತಿಳಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಮತ್ತು ವಿಜಯಪುರ  ಹೋಬಳಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಮತ್ತು ತೂಬಗೆರೆ ಹೋಬಳಿ, ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ, ಜಡಿಗೇನಹಳ್ಳಿ ಮತ್ತು ನಂದಗುಡಿ ಹೋಬಳಿ ಹಾಗೂ ನೆಲಮಂಗಲ ತಾಲ್ಲೂಕಿನ ಕಸಬಾ ಹೋಬಳಿಯ ಟೊಮ್ಯಾಟೊ ಬೆಳೆಯನ್ನು ಬೆಳೆ ವಿಮೆ ಯೋಜನೆಗೆ ಒಳಪಡಿಸಲಾಗಿದೆ.

ಆಯಾ ತಾಲ್ಲೂಕಿನ ಹೋಬಳಿಯಲ್ಲಿ ಟೊಮ್ಯಾಟೊ ಬೆಳೆಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಗಳನ್ನು ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕುಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ.

ಈ ಯೋಜನೆಯಲ್ಲಿ ಸಾಲ ಪಡೆದ ರೈತರು ಬೆಳೆ ವಿಮೆ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಛಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.                                                                                                                        ಟೊಮ್ಯಾಟೊ ಬೆಳೆಗೆ ಪ್ರತಿ ಹೆಕ್ಟೇರ್ ಗೆ ರೂ.1,18,000 ಗಳ ವಿಮಾ ಮೊತ್ತವಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ದರ ಶೇಕಡಾ 5% ಅಂದರೆ ರೂ.‌5,900 ಗಳಾಗಿರುತ್ತದೆ. ವಿಮಾ ಕಂತು ನೋಂದಾಯಿಸಿಕೊಳ್ಳಲು 2021ರ ಜುಲೈ 15 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ(ಜಿಪಂ) ಪಿ.ಮಂಜುಳಾ(ಮೊ.ಸಂ.:9448825101),‌ ತಾಂತ್ರಿಕ ಸಹಾಯಕ ಉಮಾಪತಿ ಹೆಚ್.ಜಿ.(ಮೊ.ಸಂ.:9606117615), ದೊಡ್ಡಬಳ್ಳಾಪುರ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಶ್ರೀನಿವಾಸ್ ಎಂ.(ಮೊ.ಸಂ.:9632410677),‌ ತಾಂತ್ರಿಕ ಸಹಾಯಕ ಮಾರುತಿ(ಮೊ.ಸಂ.: 9741895988), ಹೊಸಕೋಟೆ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಪ್ರಶಾಂತ್ ಆರ್(ಮೊ.ಸಂ.:9538953949), ತಾಂತ್ರಿಕ ಸಹಾಯಕ ಸೋಮಶೇಖರ್(ಮೊ.ಸಂ.: 8453966868), ನೆಲಮಂಗಲ‌ ತಾಲ್ಲೂಕಿನ‌ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ(ಜಿಪಂ) ಸುಬ್ರಮಣ್ಯ.ಜೆ.ವಿ.(ಮೊ.ಸಂ.: 9901754339), ತಾಂತ್ರಿಕ ಸಹಾಯಕ ವಿಜಯಕುಮಾರ್(ಮೊ.ಸಂ.: 9902581832) ಹಾಗೂ ಕಚೇರಿ ದೂರವಾಣಿ ಸಂಖ್ಯೆ: 080-29787453 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರಾದ ಮಾಹಾಂತೇಶ ಮುರಗೋಡ(ಮೊ.ಸಂ.: 9448999214) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!