ದೊಡ್ಡಬಳ್ಳಾಪುರ: ಜುಲೈ 5 ರಿಂದ 19 ರವರೆಗೆ ಮೂರನೇ ಹಂತದ ಅನ್ ಲಾಕ್ ಅನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಅನ್ ಲಾಕ್ ಘೋಷಣೆ ಮಾಡಿದ್ದಾರೆ.ಆದಾಗ್ಯೂ ಅನ್ ಲಾಕ್ ಸಂಭ್ರಮದಲ್ಲಿ ಮೈಮರೆತು ವರ್ತಿಸದೆ, ಜನತೆ ಮುಂಜಾಗ್ರತೆ ವಹಿಸುವುದು ಅಗತ್ಯವೆಂದು ಶಾಸಕ ಟಿ.ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.
ಅನ್ ಲಾಕ್ ಘೋಷಣೆ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ತಾಲೂಕಿನ ಜನತೆ ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು.
ಕೋವಿಡ್ ಎರಡನೇ ಅಲೆ ಆತಂಕ ಕಡಿಮೆಯಾಗಿದ್ದರು, ಮೂರನೆ ಅಲೆಯ ಆತಂಕ ಎದುರಿಗಿದೆ. ತಾಲೂಕಿನ ಕೆಲವರು ಚಿಕಿತ್ಸೆಗೆ ತೆರಳದೆ ಸ್ವಯಂ ಚಿಕಿತ್ಸೆ ತೆಗೆದುಕೊಂಡಿರುವುದು, ಸೋಂಕಿನ ಹರಡುವಿಕೆಗೆ ಕಾರಣವಾಗುವ ಆತಂಕವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ವೆಂಕಟರಮಣಯ್ಯ ಮನವಿ ಮಾಡಿದ್ದಾರೆ.
ಇನ್ನೂ ಬ್ಲಾಕ್ ಫಂಗಸ್ ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯ ಗುಣಮುಖರಾಗುತ್ತಿರುವ ಕುರಿತು ಹರ್ಷ ವ್ಯಕ್ತಪಡಿಸಿರುವ ಅವರು, ಶೀಘ್ರದಲ್ಲೇ ಆಸ್ಪತ್ರೆಗೆ ಭೇಟಿ ನೀಡಿ ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯ ಆರೋಗ್ಯ ವಿಚಾರಿಸುವುದಾಗಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..