91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿ ರದ್ದು…! / ಬಡವರೆನ್ನುವವರ ಮಾಹಿತಿ ಸದ್ದಿಲ್ಲದೆ ಸಂಗ್ರಹಿಸುತ್ತಿರುವ ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ

ಬೆಂಗಳೂರು: ಆಹಾರ ಮತ್ತು ನಾಗರಿಕ ಸರಬರಾಜ ಇಲಾಖೆ ಸದ್ದಿಲ್ಲದೆ 91 ಸಾವಿರಕ್ಕೂ ಹೆಚ್ಚಿನ ಪಡಿತರ ಚೀಟಿಗಳನ್ನು ರದ್ದುಪಡಿಸಿದೆ.

ಪಡಿತರ ಚೀಟಿ ಹೊಂದಿರುವವರ ಪೈಕಿ ಕನಿಷ್ಠ 91,189 ಜನರು ಬಿಪಿಎಲ್ ಕಾರ್ಡ್ ವ್ಯಾಪ್ತಿಗೆ ಸೇರಿದವರಲ್ಲ, ಆದರೂ ಸರ್ಕಾರದ ಸಬ್ಸಿಡಿಗಳನ್ನು ಬಳಸುತ್ತಿದ್ದಾರೆ. ಇಲಾಖೆ ಇಂತವರನ್ನು ಗುರುತಿಸಿ ಅವರ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.

ಸಬ್ಸಿಡಿ ಪಡಿತರವನ್ನು ಪಡೆಯುತ್ತಿರುವ  ಅನೇಕ ವ್ಯಕ್ತಿಗಳು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದಾರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದೆ ಎಂದು ಕಾರಣ ನೀಡಲಾಗಿದೆ.

ಇಂತಹ ಹೆಚ್ಚಿನ ಪ್ರಕರಣಗಳನ್ನು ಇಲಾಖೆ ಪರಿಶೀಲಿಸುತ್ತಿದೆ. ಇತ್ತೀಚಿನ ವರದಿಯ ಅನ್ವಯ, ಬಿಪಿಎಲ್ ಕಾರ್ಡ್ ಹೊಂದಿರುವವರ ಆದಾಯ ತೆರಿಗೆ ವಿವರಗಳ ಆಧಾರದ ಮೇಲೆ ಒಟ್ಟು 91,189 ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿ 50,060 ಜನರು ಆಂತ್ಯೋದಯ ಅನ್ನ ಯೋಜನೆ ಕಾರ್ಡ್‌ಗಳನ್ನು ಹೊಂದಿದ್ದಾರೆ, 1.20 ಲಕ್ಷ ರೂ.ಗಿಂತ ಹೆಚ್ಚಿನ ಕೌಟುಂಬಿಕ ಆದಾಯ ಹೊಂದಿರುವ 85,204 ಆದಾಯ ತೆರಿಗೆ ಪಾವತಿದಾರರು ಮತ್ತು 2,18,125 ಜನರು ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್‌ಗಿಂತ ಹೆಚ್ಚು ಭೂಮಿಯನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ವಿವರವಾದ ವರದಿಯನ್ನು ಕೋರಿದ್ದು ಹಾಗೂ ಸಬ್ಸಿಡಿಯನ್ನು ದುರುಪಯೋಗಪಡಿಸಿಕೊಳ್ಳುವ ಎಲ್ಲರನ್ನು ಕಂಡುಹಿಡಿಯಲು ಅದೇ ಮಾದರಿಯನ್ನು ಬಳಸಿಕೊಳ್ಲಲು ಇತರ ರಾಜ್ಯಗಳನ್ನು ಕೇಳಿದೆ.

ರಾಜ್ಯದಲ್ಲಿ ಒಟ್ಟು ಪಡಿತರ ಚೀಟಿ ಹೊಂದಿರುವವರ ಸಂಖ್ಯೆ 1,48,89,430. ಸ್ವೀಕರಿಸಲಾದ ಹೊಸ ಪಡಿತರ ಚೀಟಿ ಅರ್ಜಿ3,37,920-ಅನರ್ಹ ಪಡಿತರ ಚೀಟಿಗಳು 5,53,969. ತಿರಸ್ಕರಿಸಲಾದ ಅರ್ಜಿ 57,423. ಪರಿಶೀಲಿಸಲಾಗಿರುವ ಅರ್ಜ 6,092.

ಡೇಟಾ ಎಲಿಮಿನೇಷನ್ ಮಾನದಂಡಗಳು ಆಧಾರ್ ಕಾರ್ಡ್‌ಗಳ ಡೇಟಾವನ್ನು ಆಧರಿಸಿದೆ. ಅನರ್ಹ ಫಲಾನುಭವಿಗಳನ್ನು ಗುರುತಿಸಲು ಭೂಮಿ ಡೇಟಾ ಸಂಚಯದ ದಾಖಲೆಗಳನ್ನು ಸಹ ಪರಿಶೀಲಿಸಲಾಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಡೇಟಾಬೇಸ್‌ನಲ್ಲಿ ಸೇರ್ಪಡೆ ದೋಷಗಳನ್ನು ತೆಗೆದುಹಾಕಲು ಆಹಾರ ಫಲಾನುಭವಿಗಳ ಡೇಟಾಬೇಸ್ ಅನ್ನು ಈಗ ಬೇರೆ ಬೇರೆ ಇಲಾಖೆಗಳ ಫಲಾನುಭವಿಗಳ ಪಟ್ಟಿಗಳೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಇಲಾಖೆ ಯಾವುದೇ ಪಡಿತರ ಚೀಟಿ ನೀಡಿಲ್ಲ, ಮತ್ತು ಸಾಂಕ್ರಾಮಿಕ ರೋಗದ ಒಂದು ವರ್ಷಕ್ಕೂ ಹೆಚ್ಚು ಕಾಲಅಕ್ರಮ ಫಲಾನುಭವಿಗಳನ್ನು ತೆಗೆದು ಹಾಕಲು ಬಳಸಿಕೊಳ್ಳಲಾಗಿದೆ. ಡೇಟಾವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಯ ತೆರಿಗೆ ಸಲ್ಲಿಕೆಯ ಆಧಾರದ ಮೇಲೆ ಒಟ್ಟು 79,069 ಅಂತ್ಯೋದಯ ಪಡಿತರ ಚೀಟಿಗಳು ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್ ಅನಿಲ್ ಕುಮಾರ್ ರಾಷ್ಟ್ರೀಯ ವಾಹಿನಿಗೆ ತಿಳಿಸಿದ್ದಾರೆ.

ಈ ಕಾರ್ಯಾಚರಣೆಯು ಇಲಾಖೆಗೆ ತಿಂಗಳಿಗೆ 5.01 ಕೋಟಿ ರೂ., ಮತ್ತು ವಾರ್ಷಿಕವಾಗಿ 60.20 ಕೋಟಿ ರೂ ಉಳಿತಾಯಕ್ಕೆ ಕಾರಣವಾಗಲಿದೆ.

ಪಡಿತರ ಚೀಟಿ ಹೊಂದಿರುವ ಕೆಲವರು ಮೃತರಾಗಿದ್ದಾರೆ ಇತರರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆ ಅಥವಾ ಉತ್ತಮ ವೃತ್ತಿಯನ್ನು ಹೊಂದಿದ್ದಾರೆ, ಆದರೆ ಇನ್ನೂ ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ ಮತ್ತು ಮಾಸಿಕ ಸಬ್ಸಿಡಿ ಪಡಿತರವನ್ನು ಪಡೆಯುತ್ತಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

ಭ್ರಷ್ಟಾಚಾರವನ್ನು ಅಂತ್ಯ ಮಾಡಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಡಾ.ಕೆ.ಸುಧಾಕರ್‌

ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ (Dr. K.

[ccc_my_favorite_select_button post_id="118320"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!