ದೊಡ್ಡಬಳ್ಳಾಪುರ: ಕೋವಿಡ್ ಅನ್ ಲಾಕ್ ಮೂರನೇ ಹಂತದಲ್ಲಿ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವ ಹಾಗೂ ಇತರೆ ಎಲ್ಲಾ ರೀತಿಯ ದೇವಾಲಯಗಳಿಗೆ ಭಕ್ತಾಧಿಗಳ ಪ್ರವೇಶಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಭಾನುವಾರ ದೇವಾಲಯಗಳನ್ನು ಶುಚಿಗೊಳಿಸುತಿದ್ದ ದೃಶ್ಯ ಕಂಡು ಬಂತು.
ತಾಲ್ಲೂಕಿನ ಐತಿಹಾಸಿಕ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಆವರಣ ಸೇರಿದಂತೆ ಭಕ್ತಾಧಿಗಳು ಪ್ರವೇಶ ಮಾಡುವ ಎಲ್ಲಾ ಸ್ಥಳಗಳನ್ನು ನೀರಿನಿಂದ ತೊಳೆದು ಸ್ವಚ್ಛಗೊಳಿಸಿ ಸ್ಯಾನಿಟೈಸರ್ ಸಿಂಪರಣೆ ಮಾಡಲಾಯಿತು.
ಈ ಬಗ್ಗೆ ಮಾಹಿತಿ ನೀಡಿದ ದೇವಾಲಯದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ರಾಜ್ಯ ಸರ್ಕಾರ ಅನ್ಲಾಕ್ ಸಂದರ್ಭದಲ್ಲಿ ಸೂಚಿಸಲಾಗಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುವುದು. ದೇವಾಲಯದಲ್ಲಿ ಯಾವುದೇ ಸೇವೆ, ಪ್ರಸಾದ ವಿತರಣೆ ಇರುವುದಿಲ್ಲ. ಸೋಮವಾರ ಬೆಳಿಗ್ಗೆ 7 ಗಂಟೆಯ ನಂತರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ ಎಂದರು.
ಕನಸವಾಡಿಯಲ್ಲಿನ ಶನಿಮಹಾತ್ಮಸ್ವಾಮಿ ದೇವಾಲಯದಲ್ಲೂ ಭಾನುವಾರ ಸ್ವಚ್ಛತೆ ಕೆಲಸ ನಡೆಯಿತು. ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ದೇವರದರ್ಶನ ಆರಂಭವಾಗಲಿದೆ. ವ್ಯಕ್ತಿಗತ ಅಂತರ ಕಾಪಾಡುವ ಮೂಲಕ ದೇವರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದ್ದು ಕೋವಿಡ್ ಮಾರ್ಗಸೂಚಿಗಳನ್ನು ದೇವಾಲಯಕ್ಕೆ ಭೇಟಿ ನೀಡುವ ಎಲ್ಲಾ ಭಕ್ತಾದಿಗಳು ಪಾಲಿಸಬೇಕು ಎಂದು ದೇವಾಲಯ ಸಮಿತಿ ಅಧ್ಯಕ್ಷ ಪ್ರಕಾಶ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..