ದೊಡ್ಡಬಳ್ಳಾಪುರ: ಇಂದಿನಿಂದ ದೇವಸ್ಥಾನಗಳ ತೆರೆಯಲು ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನ ಹಾಗೂ ಕನಸವಾಡಿಯ ಶ್ರೀ ಶನಿಮಹಾತ್ಮಸ್ವಾಮಿ ದೇವಾಲಯಗಳು ಅರ್ಚಕರಿಂದ ದೇವಸ್ಥಾನದ ವಿಮಾನ ಗೋಪುರದ ಬಾಗಿಲಿಗೆ ಪೂಜೆ ಸಲ್ಲಿಸಿ ತೆರೆಯಲಾಯಿತು.
ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಹಿನ್ನೆಲೆ ಆವರಣದಲ್ಲಿ ಸ್ಯಾನಿಟೈಸ್ ಮಾಡಿಸಲಾಗಿದ್ದು,ಬೆಳಗಿನಿಂದಲೆ ದೇವರ ದರ್ಶನ ಪಡೆಯಲು ದೇವಸ್ಥಾನಗಳತ್ತ ಆಗಮಿಸುತ್ತಿದ್ದಾರೆ.
ದೇವಾಲಯದಲ್ಲಿ ಹಾಕಲಾಗಿರುವ ಬಾಕ್ಸ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ದರ್ಶನ ಪಡೆಯಬಹುದಾಗಿದೆ.
ಕನಸವಾಡಿಯಲ್ಲಿನ ಶನಿಮಹಾತ್ಮಸ್ವಾಮಿ ದೇವಾಲಯದಲ್ಲೂ ಭಾನುವಾರ ಸ್ವಚ್ಛತೆ ಕೆಲಸ ನಡೆಯಿತು. ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ದೇವರ ದರ್ಶನ ಆರಂಭವಾಗಿದ್ದು, ವ್ಯಕ್ತಿಗತ ಅಂತರ ಕಾಪಾಡುವ ಮೂಲಕ ದೇವರದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ಕೋವಿಡ್ ಮಾರ್ಗಸೂಚಿಗಳನ್ನು ದೇವಾಲಯಕ್ಕೆ ಭೇಟಿ ನೀಡುವ ಎಲ್ಲಾ ಭಕ್ತಾದಿಗಳು ಪಾಲಿಸಬೇಕು ಎಂದು ದೇವಾಲಯ ಸಮಿತಿ ಅಧ್ಯಕ್ಷ ಪ್ರಕಾಶ್ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..