ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಗಳು ಸಂಪೂರ್ಣ ಉಚಿತ

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಇರುವ ಇಲಾಖೆಯ ಯೋಜನೆಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಇಲಾಖೆಯಿಂದ ಯಾವುದೇ ರೀತಿಯ ಶುಲ್ಕವನ್ನು ನಿಗದಿ ಪಡಿಸಿಲ್ಲವೆಂದು ಪ್ರಕಟಣೆ ತಿಳಿಸಿದೆ.

ಇಲಾಖೆಯ ಯೋಜನೆಗಳಾದ ಯಂತ್ರಚಾಲಿತ ಮೋಟಾರು ವಾಹನ, ಶ್ರವಣ ದೋಷವುಳ್ಳ ವಿಕಲಚೇತನರಿಗೆ ಹೊಲಿಗೆ ಯಂತ್ರ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ವಿಕಲಚೇತನರಿಗೆ ಪ್ರೋತ್ಸಾಹ ಧನ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನ ಸಲಕರಣೆ ವಿತರಣೆ, ಸ್ವಯಂ ಉದ್ಯೋಗಕ್ಕೆ ಆಧಾರ ಯೋಜನೆ, ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಧಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್ ಟಾಪ್ ಹಾಗೂ ಬ್ರೈಲ್ ಕಿಟ್, ಅಂಧ ಮಹಿಳೆಯರ ಮಕ್ಕಳ ಶಿಶು ಪಾಲನೆಗಾಗಿ ಭತ್ಯೆ, ವಿಕಲಚೇತನರನ್ನು ಸಾಮಾನ್ಯರು ವಿವಾಹವಾದಲ್ಲಿ ವಿವಾಹ ಪ್ರೋತ್ಸಾಹ ಧನ ಹಾಗೂ ಇಲಾಖೆಯ ಅನುದಾನದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅನುಷ್ಟಾನಗೊಳಿಸುತ್ತಿರುವ ಹಾಗೂ ಇತರೆ ಎಲ್ಲಾ ಯೋಜನೆಗಳು ಸಂಪೂರ್ಣವಾಗಿ ಉಚಿತವಾಗಿದೆ.

ಇಲಾಖೆಯ ಎಲ್ಲಾ ಯೋಜನೆಗಳನ್ನು ಯಾವುದೇ ರೀತಿಯ ಹಣ ಕೇಳುವ ಮದ್ಯವರ್ತಿಗಳ ಸಂಪರ್ಕವಿಲ್ಲದೆ, ನೇರವಾಗಿ ನಿಮ್ಮ ಗ್ರಾಮ, ನಗರ, ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುವ ಗ್ರಾಮೀಣ, ನಗರ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಉಚಿತವಾಗಿ ಇಲಾಖಾ ಸೌಲಭ್ಯಗಳ ಮಾಹಿತಿ ಹಾಗೂ ಅನುಕೂಲಗಳನ್ನು ಪಡೆಯಬಹುದಾಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಲಾಖಾ ಯೋಜನೆಗಳಿಗಾಗಿ ಯಾವುದೇ ಮದ್ಯವರ್ತಿಗಳು ವಿಕಲಚೇತನರನ್ನ ಹಣ ಕೇಳಿದ್ದಲ್ಲಿ ವಿಕಲಚೇತನರು ಹತ್ತಿರದ ಭ್ರಷ್ಠಾಚಾರ ನಿಗ್ರಹ ದಳ (ಎ.ಸಿ.ಬಿ)ಗೆ ನೇರವಾಗಿ ಮಾಹಿತಿ ನೀಡುವುದು.

ಇಲಾಖಾ ಸೌಲಭ್ಯಗಳ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಡಳಿತ ಭವನ, ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]