ದೊಡ್ಡಬಳ್ಳಾಪುರ: ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಜುಲೈ 7 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಈ ಹಿನ್ನಲೆ ಇಂದು ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಹೇಮಲತಾ ಅವರು ಆಸ್ಪತ್ರೆಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..