ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಾಣವಾದ ವಿದ್ಯುತ್ ಮತಯಂತ್ರ ಹಾಗೂ ಮತ ಖಾತರಿ ಪಡಿಸುವ ಯಂತ್ರಗಳ(ಇವಿಎಂ/ವಿವಿಪ್ಯಾಟ್) ಉಗ್ರಾಣವನ್ನು ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ವಾಜುಬಾಯಿ ವಾಲ ವರ್ಚ್ಯುಯಲ್ ವೇದಿಕೆ ಮೂಲಕ ಉದ್ಘಾಟಿಸಿದರು.
ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಸಂಜೀವ್ ಕುಮಾರ್, ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನಾ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಸೇರಿದಂತೆ ಇತರರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……