ದೊಡ್ಡಬಳ್ಳಾಪುರ: ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ನಾಳೆ (ಜುಲೈ 7) ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿರುವ ಹಿನ್ನೆಲೆಯಲ್ಲಿ ಸುಮಾರು 350ಕ್ಕು ಹೆಚ್ಚು ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
10ಗಂಟೆಗೆ ಬೆಂಗಳೂರಿನಿಂದ ಹೊರಟು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 1ಗಂಟೆಗೆ ಮತ್ತೆ ಬೆಂಗಳೂರಿಗೆ ತಲುಪುಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ.
ಭದ್ರತೆಗಾಗಿ ಅನ್ಯ ತಾಲೂಕಿನವರು ಸೇರಿ ಸುಮಾರು 350ಕ್ಕು ಹೆಚ್ಚು ಪೊಲೀಸರನ್ನು ನೇಮಿಸಲಾಗುತ್ತಿದ್ದು, ಒಂದು ಕೆಎಸ್ ಆರ್ಪಿ ತುಕಡಿ, 3 ಜಿಲ್ಲಾ ಶಸ್ತಪಡೆಗಳನ್ನು ಸಜ್ಜಾಗಿಡಲಾಗಿದೆ.
ಇಂದು ಸಂಜೆ ನಗರದ ಆಸ್ಪತ್ರೆ ಆವರಣದಲ್ಲಿ ಪೊಲಿಸರನ್ನು ಭದ್ರತಾ ಕಾರ್ಯ ನಿಯುಕ್ತಿಗೆ ನೇಮಿಸಲಾಯಿತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಡಿವೈಎಸ್ಪಿಗಳಾದ ಟಿ.ರಂಗಪ್ಪ, ಜಗದೀಶ್, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಇನ್ಸ್ಪೆಕ್ಟರ್ ಸತೀಶ್, ಸಬ್ ಇನ್ಸ್ಪೆಕ್ಟರ್ ಗಳಾದ ಗೋವಿಂದ್, ಗಜೇಂದ್ರ, ಮಂಜುನಾಥ್ ಸೇರಿದಂತೆ ಜಿಲ್ಲೆ ವಿವಿಧ ಠಾಣೆಗಳ ಪೊಲೀಸರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……