ದೊಡ್ಡಬಳ್ಳಾಪುರದ ಮೇಕ್‌ಶಿಫ್ಟ್ ಆಸ್ಪತ್ರೆ ಉದ್ಘಾಟನೆಗೆ ಕ್ಷಣ ಗಣನೆ / 10.45ಕ್ಕೆ ಸಿಎಂ ಯಡಿಯೂರಪ್ಪ ಆಗಮನ

ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಿಸಿರುವ 70 ಹಾಸಿಗೆಗಳ ಮೇಕ್‌ಶಿಫ್ಟ್ ಆಸ್ಪತ್ರೆಯ ಉದ್ಘಾಟನಾ ಸಮಾರಂಭವನ್ನು 2021ರ ಜುಲೈ 07 ರಂದು ಬೆಳಿಗ್ಗೆ 11 ಗಂಟೆಗೆ ದೊಡ್ಡಬಳ್ಳಾಪುರ ನಗರದ ಮೇಕ್‌ಶಿಫ್ಟ್ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೇಕ್‌ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದು, ಸಮಾರಂಭದಲ್ಲಿ ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು(ಎಂ.ಟಿ.ಬಿ), ಕಂದಾಯ ಸಚಿವರಾದ ಆರ್.ಅಶೋಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ|| ಕೆ.ಸುಧಾಕರ್ ಅವರು ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಲಿದ್ದಾರೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಬಿ.ಎನ್.ಬಚ್ಚೇಗೌಡ, ನೆಲಮಂಗಲ ಶಾಸಕ ಡಾ|| ಕೆ.ಶ್ರೀನಿವಾಸಮೂರ್ತಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮತ್ತು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಪಿ.ಹೇಮಲತಾ, ದೊಡ್ಡಬಳ್ಳಾಪುರ ತಾಲ್ಲೂಕು ಎ.ಪಿ.ಎಂ.ಸಿ. ಅಧ್ಯಕ್ಷ ವಿ.ವಿಶ್ವನಾಥರೆಡ್ಡಿ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ತಾಲ್ಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಸಂಘ ನಿಯಮಿತ ಅಧ್ಯಕ್ಷ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. 

ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಕರ್ನಾಟಕ ಸರ್ಕಾರ, ವಿಶ್ವ ಸಂಸ್ಥೆ ಅಭಿವೃದ್ಧಿ ಕಾರ್ಯಕ್ರಮ(UNDP) ಮತ್ತು ಕಾರ್ಪೋರೇಟ್ ಕಂಪನಿಗಳ ಸಿ.ಎಸ್.ಆರ್. ಸಹಭಾಗಿತ್ವದಲ್ಲಿ ಪ್ರಧಾನ ವೈಜ್ಞಾನಿಕ ಸಲಹೆಗಾರ ಕಚೇರಿ(ಪಿ.ಎಸ್.ಎ) ಮೂಲಕ ಮಾಡ್ಯುಲಸ್ ಹೌಸಿಂಗ್ ಸಂಸ್ಥೆ ನಿರ್ಮಾಣ ಮಾಡಿದ್ದು, ಅಮೆರಿಕನ್ ಇಂಡಿಯಾ ಫೌಂಡೇಶನ್ ಸಂಸ್ಥೆಯ ಮೂಲಕ ದಾನಿಗಳಾದ ಲೆನವೋ, ಗೋಲ್ಡ್‌ಮನ್ ಪ್ಯಾಚಸ್ ಕಂಪನಿಗಳಿಂದ ಪ್ರಧಾನ ನೆರವು ದೊರೆತಿದೆ. ಜೊತೆಗೆ ಸದರಿ ಆಸ್ಪತ್ರೆಗೆ ಬೇಕಾಗುವ ಮಾನವ ಸಂಪನ್ಮೂಲವನ್ನು ಡಾಕ್ಟರ್ಸ್ ಫಾರ್ ಯು ಸಂಸ್ಥೆ, ಇಂಡೋ ಮಿಮ್ ಟೆಕ್ ಪ್ರೈ.ಲಿ ಸೇರಿದಂತೆ ಇನ್ನಿತರ ಸಂಸ್ಥೆ ಅವರು ಒದಗಿಸಿದ್ದಾರೆ. 

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ|| ಕೋನ ವಂಶಿಕೃಷ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಪ್ರಗತಿಪರ ಸಂಘಟನೆಗಳು, ಮುಖಂಡರುಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿಹಾರ ಫಲಿತಾಂಶ; ಮತದಾರರ ತೀರ್ಪಿಗೆ ತಲೆಬಾಗುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ ಫಲಿತಾಂಶ; ಮತದಾರರ ತೀರ್ಪಿಗೆ ತಲೆಬಾಗುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಹಾರ ಜನ ತಮ್ಮ ಆದೇಶ ನೀಡಿದ್ದು, ಅದನ್ನು ಪಾಠವಾಗಿ ಪರಿಗಣಿಸುತ್ತೇವೆ. ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಹೊಸ ತಂತ್ರಗಾರಿಕೆ ರೂಪಿಸುತ್ತೇವೆ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="116190"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!