ಟೌನ್‌ಶಿಪ್‌ಗಳಿಗೆ ಅನುಮತಿ ನೀಡುವ ಕಾರ್ಯಕ್ಕೆ ಚುರುಕು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಬೆಂಗಳೂರು: ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. 

ನಗರದ ಎಫ್‌ಕೆಸಿಸಿಐ ನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೈಗಾರಿಕೋದ್ಯಮಿಗಳು ಸಾಕಷ್ಟು ಬಾರಿ ಮನವಿಯನ್ನು ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಗರಾಭಿವೃದ್ದಿ ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಹಲವಾರು ಬಾರಿ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಈ ಬಾರಿಯ ಆಯವ್ಯಯದಲ್ಲಿ ಹಾಗೂ ನೂತನ ಕೈಗಾರಿಕಾ ನೀತಿಯಲ್ಲೂ ಪ್ರಸ್ತಾಪಿಸಲಾಗಿದೆ.

ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ನೂತನ ಸ್ಲಾಬನ್ನು ರಚಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ವಿಷಯವಾಗಿ ಸಚಿವ ಸಂಪುಟದ ಮುಂದೆ ನಗರಾಭಿವೃದ್ದಿ ಇಲಾಖೆಯ ವತಿಯಿಂದ ಶೀಘ್ರದಲ್ಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು. 

 ಹಳೆಯ ತೆರಿಗೆಯ ಬಗ್ಗೆ: ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಹಾಗೂ ಕೆಎಸ್‌ಎಸ್‌ಐಡಿಸಿ ವತಿಯಿಂದ ಅಭಿವೃದ್ದಿಪಡಿಸಲಾದ ಕೈಗಾರಿಕಾ ಪ್ರದೇಶಗಳನ್ನು ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವ ಮುನ್ನ ತೆರಿಗೆ ಸಂಗ್ರಹ ಮಾಡುವ ಹಾಗಿಲ್ಲ. ಆದರೆ, ಕೆಲವು ಕಡೆ ಸ್ಥಳೀಯ ಸಂಸ್ಥೆಗಳು ತೆರಿಗೆ ಸಂಗ್ರಹಿಸುತ್ತಿವೆ. ಆದರೆ ತೆರಿಗೆ ನೀಡುವ ಕೈಗಾರಿಕೆಗಳು ಸ್ಥಳೀಯ ಸಂಸ್ಥೆಗಳಿಂದ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಆಗದೇ ಇರುವ ಹಿನ್ನಲೆಯಲ್ಲಿ ಹಲವಾರು ದೂರುಗಳನ್ನು ನೀಡುತ್ತಿದ್ದಾರೆ.

ಹಳೆಯ ತೆರಿಗೆಯ ಬಗ್ಗೆ ಒಂದು ಸ್ಪಷ್ಟವಾದ ವೈಜ್ಞಾನಿಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೂರು ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ಎಲ್ಲಾ ರೀತಿಯ ಸಮಸ್ಯೆಗಳಿಗೆ ನಗರಾಭಿವೃದ್ದಿ ಸಚಿವರಾದ ಬಿ.ಎ ಬಸವರಾಜ ಅವರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು. 

ಟೌನ್‌ ಶಿಪ್‌ಗಳ: ಟೌನ್‌ ಶಿಪ್‌ಗಳನ್ನು ನಿರ್ಮಿಸುವ ಬಗ್ಗೆ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಗರಾಭಿವೃದ್ದಿ ಇಲಾಖೆಯಿಂದಿಗೆ ನಡೆದಿವೆ. ಟೌನ್‌ಶಿಪ್‌ಗಳನ್ನು ನಿರ್ಮಿಸುವ ಮೂಲಕ ಸಂಗ್ರಹವಾಗುವ ಆದಾಯದಲ್ಲಿ ಶೇಕಡಾ 70 ರಷ್ಟು ಟೌನ್‌ಶಿಪ್‌ ಆಡಳಿತ ಮಂಡಳಿಗೆ ಹಾಗೂ ಶೇಡಕಾ 30 ರಷ್ಟು ಸ್ಥಳೀಯ ಸಂಸ್ಥೆಗಳೀಗೆ ನೀಡುವುದರಿಂದ ಎರಡೂ ಕಡೆ ಅಭಿವೃದ್ದಿ ಸಾಧ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಜಂಟಿ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು. 

ನಗರಾಭಿವೃದ್ದಿ ಸಚಿವ ಬಿ.ಎ ಬಸವರಾಜು ಮಾತನಾಡಿ ರಾಜ್ಯಾದ್ಯಂತ ಇರುವ ಈ ಸಮಸ್ಯೆಗಳ ಬಗ್ಗೆ ಸರಕಾರದ ಮಟ್ಟದಲ್ಲಿ ಹಲವಾರು ಬಾರಿ ಚರ್ಚೆ ನಡೆದಿದೆ. ಕೈಗಾರಿಕೆಗಳು ಅನುಭಿವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾದ ಚರ್ಚೆ ನಡೆಸಲಾಗಿದೆ. ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ಸಭೆಯ ಮುಂದೆ ಟೌನ್‌ಶಿಪ್‌ ಹಾಗೂ ಕೈಗಾರಿಕೆಗಳ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಕ್ಯಾಬಿನೆಟ್‌ ನೋಟ್‌ ಮಂಡಿಸಲಾಗುವುದು ಎಂದು ಹೇಳಿದರು. 

ಸಭೆಯಲ್ಲಿ ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭುಷಣ್‌, ನಿರ್ದೇಶಕಿ ಶ್ರೀಮತಿ ಕಾವೇರಿ ಎಫ್‌ಕೆಸಿಸಿಐ ಅಧ್ಯಕ್ಷ ಪೆರಿಕಾಲ್‌ ಎಂ ಸುಂದರ್‌, ಹಿರಿಯ ಉಪಾಧ್ಯಕ್ಷ ಡಾ. ಐ.ಎಸ್‌ ಪ್ರಸಾದ್‌ ಸೇರಿದಂತೆ ರಾಜ್ಯದ ವಿವಿಧ ಬಾಗಗಳಿಂದ ಆಗಮಿಸಿದ್ದ ಎಫ್‌ಕೆಸಿಸಿಐ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸಮಸ್ಯೆಗಳ ನಡುವೆ ಮಿನುಗಿದ ದೃವತಾರೆ ಎಸ್ಎಂ ಕೃಷ್ಣ: ರಾಜಘಟ್ಟರವಿ ಸ್ಮರಣೆ| SM Krishna

ಸಮಸ್ಯೆಗಳ ನಡುವೆ ಮಿನುಗಿದ ದೃವತಾರೆ ಎಸ್ಎಂ ಕೃಷ್ಣ: ರಾಜಘಟ್ಟರವಿ ಸ್ಮರಣೆ| SM Krishna

ಬೆಂಗಳೂರನ್ನು ಸಿಂಗಾಪುರ ಮಾಡೋ ಮುಖ್ಯಮಂತ್ರಿ ಎಂದು ಲೇವಡಿ ಮಾಡಿದ್ದೇವು ಆದರೆ ಈ | SM Krishna

[ccc_my_favorite_select_button post_id="98305"]
ಮಾಜಿ ಸಿಎಂ ಎಸ್‌ಎಂ ಕೃಷ್ಣ ಅಗಲಿಕೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ| SM Krishna

ಮಾಜಿ ಸಿಎಂ ಎಸ್‌ಎಂ ಕೃಷ್ಣ ಅಗಲಿಕೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ| SM Krishna

ಅಗಲಿದ ಹಿರಿಯ ನಾಯಕನಿಗೆ ದೊಡ್ಡಬಳ್ಳಾಪುರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. SM Krishna

[ccc_my_favorite_select_button post_id="98312"]
ತಮಿಳುನಾಡಿಗೆ ಕೇಂದ್ರದಿಂದ ಪರಿಹಾರ ಘೋಷಣೆ..!| Cyclone Fengal

ತಮಿಳುನಾಡಿಗೆ ಕೇಂದ್ರದಿಂದ ಪರಿಹಾರ ಘೋಷಣೆ..!| Cyclone Fengal

ತಮಿಳುನಾಡು, ಪುದುಚೇರಿಗೆ ನೆರವಾಗಲು ಕೇಂದ್ರ ಗೃಹ ಸಚಿವಾಲಯ ಸಮ್ಮತಿಸಿದೆ. Cyclone Fengal

[ccc_my_favorite_select_button post_id="98129"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

IPLಗೆ ಆಯ್ಕೆ.. ಘಾಟಿ ಸುಬ್ರಹ್ಮಣ್ಯ ಸ್ವಾಮಿ ಹರಕೆ ತೀರಿಸಿದ ಕ್ರಿಕೆಟಿಗ ಕುಲ್ದೀಪ್ ಸೇನ್..!

IPLಗೆ ಆಯ್ಕೆ.. ಘಾಟಿ ಸುಬ್ರಹ್ಮಣ್ಯ ಸ್ವಾಮಿ ಹರಕೆ ತೀರಿಸಿದ ಕ್ರಿಕೆಟಿಗ ಕುಲ್ದೀಪ್ ಸೇನ್..!

ಆಯ್ಕೆಗೂ ಮುನ್ನ ಘಾಟಿ ಸುಬ್ರಹ್ಮಣ್ಯ ದೇವರಿಗೆ ಹರಕ್ಕೆ ಹೊತ್ತಿದ್ದ ಕುಲ್ದೀಪ್ ಸೇನ್ ಅವರು, ಆಯ್ಕೆ IPLಗೆ ಆಯ್ಕೆ

[ccc_my_favorite_select_button post_id="98146"]
Doddaballapura: ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ.. ಮೂವರ ಬಂಧನ

Doddaballapura: ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ.. ಮೂವರ ಬಂಧನ

ಇನ್ಸ್ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರ ತಂಡ Doddaballapura

[ccc_my_favorite_select_button post_id="98243"]
Accident| ಸಚಿವ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತ..!

Accident| ಸಚಿವ ಕೆ.ಹೆಚ್ ಮುನಿಯಪ್ಪ ಕಾರು ಅಪಘಾತ..!

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ (accident) ನಡೆದಿದೆ ಎನ್ನಲಾಗಿದ್ದು

[ccc_my_favorite_select_button post_id="97893"]

ಆರೋಗ್ಯ

ಸಿನಿಮಾ

ದರ್ಶನ್‌ಗೆ ರಿಲೀಫ್.. ಜಾಮೀನು ಅವಧಿ ವಿಸ್ತರಣೆ..!| Darshan

ದರ್ಶನ್‌ಗೆ ರಿಲೀಫ್.. ಜಾಮೀನು ಅವಧಿ ವಿಸ್ತರಣೆ..!| Darshan

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು Darshan ಅವರಿಗೆ

[ccc_my_favorite_select_button post_id="98225"]

ದರ್ಶನ್ ಸರ್ಜರಿ ಡೇಟ್ ಫಿಕ್ಸ್; Darshan

[ccc_my_favorite_select_button post_id="98221"]

ರೂ.621 ಕೋಟಿ ಬಾಚಿದ Pushpa 2

[ccc_my_favorite_select_button post_id="98180"]

ಅಪ್ಪ ನನ್ನನ್ನು ಹೊಡೆದಿದ್ದಾರೆ.. ಮೋಹನ್ ಬಾಬು ವಿರುದ್ಧ

[ccc_my_favorite_select_button post_id="98165"]