ದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.
2024ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್ ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ಪ್ರಧಾನಿ ಮೋದಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವಾಗಿತ್ತು. ಆ ಸ್ಥಾನಕ್ಕೆ ಕೆ. ಅಣ್ಣಾಮಲೈ ಉಚಿತ ಅಭ್ಯರ್ಥಿ ಎಂದು ಬಿಂಬಿಸಲಾಗಿತ್ತು. ಅದಂತೆಯೇ ಅಣ್ಣಾಮಲೈ ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..