ನರೇಗಾ ಯೋಜನಾ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಸಿಇಓ ಎಂ.ಆರ್.ರವಿಕುಮಾರ್ ಸೂಚನೆ

ಬೆಂ.ಗ್ರಾ.ಜಿಲ್ಲೆ: ಪ್ರಸಕ್ತ ವರ್ಷದ ಜಲಶಕ್ತಿ ಅಭಿಯಾನದ ನೂರು ದಿನದ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ಕೆರೆ, ಕುಂಟೆ, ಕಲ್ಯಾಣಿಗಳಲ್ಲಿ ಹೂಳೆತ್ತುವುದು ಹಾಗೂ ಸ್ವಚ್ಛತೆಯನ್ನು ಮಾಡುವ ಮೂಲಕ ಮಳೆ ನೀರು ಸಂಗ್ರಹವಾಗುವಂತೆ ಮಾಡುವುದರಿಂದ ಅಂತರ್ಜಲ ಅಭಿವೃದ್ಧಿಯಾಗುವ ಜೊತೆಗೆ ಗ್ರಾಮಗಳ ಅಭಿವೃದ್ಧಿಯಾಗುತ್ತದೆ ಆದ್ದರಿಂದ ನರೇಗಾ ಯೋಜನಾ ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ  ಜಿಲ್ಲಾ ಪಂಚಾಯಿತಿ ಕಚೇರಿ  ಸಭಾಂಗಣದಲ್ಲಿಂದು ನಡೆದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸರ್ಕಾರದ ಆದೇಶಗಳಿಗೆ ಅನುಸಾರವಾಗಿ ತುರ್ತಾಗಿ ಕೆಲಸಗಳನ್ನು ನಿರ್ವಹಿಸಬೇಕು ಎಂದು ಸೂಚಿಸಿದ ಅವರು ನರೇಗಾ ಯೋಜನೆಯಡಿ ಬರುವಂತಹ ಕಾಮಗಾರಿಗಳಾದ ಕೆರೆ, ಕುಂಟೆಗಳಲ್ಲಿ ಹೂಳೆತ್ತುವುದು, ಬದು, ಚರಂಡಿ, ಕೃಷಿ ಹೊಂಡ ನಿರ್ಮಾಣ, ಗ್ರಾಮೀಣ ರಸ್ತೆ ಹಾಗೂ ಇತರೆ ಕಾಮಗಾರಿಗಳನ್ನು ಜವಾಬ್ದಾರಿ ವಹಿಸಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.

ಎಲ್ಲಾ ಕಾಮಗಾರಿಗಳಿಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲು ಸಾಧ್ಯವಿಲ್ಲವಾದ್ದರಿಂದ ಕಾಳಜಿಯಿಂದ ಕಾಮಗಾರಿಗಳನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಿದರೆ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿದಂತಾಗುತ್ತದೆ ಎಂದು ತಿಳಿಸಿದರು. 

ಎಲ್ಲರೂ ಪ್ರತಿದಿನ ಸರಿಯಾದ ಸಮಯಕ್ಕೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಹಾಜರಿರಬೇಕು ಹಾಗೂ ಕ್ರಿಯಾ ಯೋಜನೆಯ ಅನುಸಾರವಾಗಿಯೇ ಕೆಲಸ ನಿರ್ವಹಿಸಬೇಕು ಎಂದರಲ್ಲದೆ, ಸ್ಥಳೀಯವಾಗಿ ಯಾವುದೇ ಸಮಸ್ಯೆಗಳಿದ್ದರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಪ್ರಸಕ್ತ ವರ್ಷ ನರೇಗಾ ಯೋಜನೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಬೇಕು ಎಂದ ಅವರು ಯಾವುದೇ ಹಳೆಯ ಕಾಮಗಾರಿಗಳು ಬಾಕಿ ಇದ್ದಲ್ಲಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ತಿಳಿಸಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಮೇ.ಇನ್‍ವೆನ್‍ಸಿಸ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‍ನ ಹಿರಿಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!