ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ‌ ಜಿಲ್ಲಾಧಿಕಾರಿ ಆರ್.ಲತಾ ಕಟ್ಟು ನಿಟ್ಟಿನ ಸೂಚನೆ

ಚಿಕ್ಕಬಳ್ಳಾಪುರ: ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ  ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ಆರ್ ಲತಾ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದರಿಂದ   ಯುವಕರು ಮದ್ಯದ ಅಮಲಿಗೆ ಒಳಗಾಗುತ್ತಾರೆ. ಅಕ್ರಮ ಮದ್ಯ ಮಾರಾಟದ ವಿರುದ್ಧ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಪ್ರಕರಣ ದಾಖಲಿಸುತ್ತಿದ್ದಾರೆ. ಆದರೆ ಅಬಕಾರಿ ಇಲಾಖೆಯವರು ನಿರೀಕ್ಷಿತ ಮಟ್ಟದಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಮಿತಿಯ ಸದಸ್ಯರು ಸಭೆಯಲ್ಲಿ ದೂರಿದರು. ಈ ಹಿನ್ನಲೆಯಲ್ಲಿ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಡಿಸಿಯವರು ಸೂಚಿಸಿದರು.

ಗೌರಿಬಿದನೂರು ತಾಲೂಕು ಮಂಚೇನಹಳ್ಳಿ ಗ್ರಾಮದ ಬಾಬೂ ಜಗಜೀವನ್ ರಾಂ ಕಾಲೋನಿಗೆ ಮಂಜೂರಾಗಿರುವ ಸ್ಮಶಾನಕ್ಕೆ ದಾರಿ ಇಲ್ಲದೆ ಕೆರೆ ಅಂಗಳದಲ್ಲಿ ಶವಸಂಸ್ಕಾರ ಮಾಡುತ್ತಿರುವುದಾಗಿ ಸದಸ್ಯ ಜಿ.ವೆಂಕಟರಮಣಪ್ಪ ಅವರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಗೌರಿಬಿದನೂರು ತಹಸೀಲ್ದಾರ್ ಶ್ರೀನಿವಾಸ್ ಅವರು, ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ಆದಷ್ಟು  ಬೇಗಾ  ಸ್ಮಶಾನಕ್ಕೆ ದಾರಿ ವ್ಯವಸ್ಥೆ ಮಾಡಲಾಗುವುದು ಎಂದು  ತಿಳಿಸಿದರು.

ಸಮಿತಿಯ ಸದಸ್ಯರಾದ ಜಿ.ವಿ.ವಿಶ್ವನಾಥ್ ಅವರು ಮಾತನಾಡಿ, ಗುಡಿಬಂಡೆಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಳೆಯ ಕೋರ್ಟ್ ಕಟ್ಟಡವು ಖಾಲಿಯಿದ್ದು , ಅಲ್ಲಿ ಸ್ವಚ್ಛತೆ ಮರಿಚೀಕೆಯಾಗಿದೆ , ಈ ಜಾಗವನ್ನು ಯಾವುದಾದರೂ ಒಂದು ಸರ್ಕಾರಿ ಕಚೇರಿಯ  ಕೆಲಸಕ್ಕೆ ಅಥವಾ ಕಚೇರಿಗೆ ಬಳಸಿಕೊಂಡರೆ ಸಾರ್ವಜನಿಕರಿಗೆ  ಅನುಕೂಲವಾಗಲಿದೆ. ಈ ಬಗ್ಗೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಗುಡಿಬಂಡೆ ತಹಸೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸಂಬಂಧಿಸಿದ ಸ್ಮಶಾನಗಳ ದಾರಿ, ಪರಿಶಿಷ್ಟರ ಜಮೀನುಗಳ  ಖಾತೆ ಬಗ್ಗೆ ,ಜಮೀನು  ಒತ್ತುವರಿ, ಅಂಬೇಡ್ಕರ್ ಭವನ, ವಾಲ್ಮೀಕಿ ಭವನಗಳಿಗೆ ಜಮೀನು ಮಂಜೂರು,ಬಾಲ್ಯವಿವಾಹ,  ಪರಿಶಿಷ್ಟರ ಮೇಲಿನ ದೌರ್ಜನ್ಯ ಸೇರಿದಂತೆ ಇತರೆ ವಿಷಯಗಳ  ಕುರಿತ ದೂರಿನ   ವಿವರ  ಪಡೆದು ಈ  ಎಲ್ಲಾ ವಿಷಯಗಳ ಬಗ್ಗೆ  ಅಗತ್ಯ  ಕ್ರಮ  ಕೈಗೊಂಡು ಇತ್ಯರ್ಥ  ಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜ್ ಆನಂದ್ ರೆಡ್ಡಿ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿ.ವಿ.ಲಕ್ಷ್ಮಣ್ ರಾಜ್, ಜಿ.ವೆಂಕಟರಮಣಪ್ಪ, ಎಸ್.ಎನ್.ಅಂಜಿನಪ್ಪ, ವಿ.ಶ್ರೀನಿವಾಸ್, ಜಿ.ವಿ.ವಿಶ್ವನಾಥ್, ಮಂಜುಳಾ, ಗಂಗಾಧರ್, ಸುಧಾಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ಕಾರು ಪಲ್ಟಿ..!

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿರುವ ಘಟನೆ (Accident) ತಾಲೂಕಿನ ತಪಸೀಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="111050"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!