ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2021-22ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮರಾಜ್ ದಂಡಾವತಿ ತಿಳಿಸಿದ್ದಾರೆ.
ಪರೀಕ್ಷೆಗಳು 2021ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ ಅಗಸ್ಟ್ 31 ಇರುತ್ತದೆ. 50 ರೂ.ಗಳ ಹೆಚ್ಚುವರಿ ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 15ರವರೆಗೆ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಗಾಗಿ 25 ರೂ.ಗಳ ಶುಲ್ಕ ಪಾವತಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ 30 ರೂ. ಮನಿಯಾರ್ಡರ ಮಾಡಿ ಅಂಚೆ ಮೂಲಕ ಅರ್ಜಿ ಪಡೆಯಬಹುದಾಗಿದೆ.
ಪರೀಕ್ಷಾ ಅರ್ಜಿಗಳನ್ನು ವೆಬ್‍ಸೈಟ್ ನಿಂದ ಸಹ ಪಡೆದುಕೊಳ್ಳಬಹುದು. ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25 ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಹಾಗೂ ದೂರವಾಣಿ ಸಂಖ್ಯೆ:080-26623584ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..