ಎಪಿಎಂಸಿ ಕಾಯ್ದೆ ತಿದ್ದುಪಡಿ ಯುಪಿಎ ಸರ್ಕಾರದ ಘೋಷಣೆಯಾಗಿತ್ತು: ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್

ದೊಡ್ಡಬಳ್ಳಾಪುರ: ರೈತರ ಆತ್ಮಹತ್ಮೆಗಳನ್ನು ತಡೆಗಟ್ಟಿ ರೈತರ ಆದಾಯ ದ್ವಿಗುಣಗೊಳಿಸುವ ಕೃಷಿ ಕಲ್ಯಾಣ ಯೋಜನೆಗಳು ಮೋದಿ ಸರ್ಕಾರದಲ್ಲಾಗಿವೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ಎಪಿಎಂಸಿ ಕಾಯ್ದೆ ತಿದ್ದುಪಡಿ ತರಲು ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆ ಅನುಷ್ಟಾನ ಮಾಡಿದರೆ ಈಗ ವಿರೋಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಹೇಳಿದ್ದಾರೆ.

Guarantee scheme
ಎನ್ ವಿಶ್ವನಾಥ್

ನಗರದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ರೈತ ಮೋರ್ಚಾ ಕಾರ್ಯಕಾರಣಿ ಸಭೆಯ ವೇಳೆ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಆದಾಯ ದ್ವಿಗುಣವಾಗುವ ನಿಟ್ಟಿನಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಸಿಂಚಾಯಿ ಯೋಜನೆ, ರೈತರಿಗೆ ಇ ಮಾರ್ಕೆಟಿಂಗ್ ವ್ಯವಸ್ಥೆ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದೆ. ದೇಶದ 22 ಕೋಟಿ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್, 44 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಕೃಷಿ ಸಿಂಚಾಯಿ ಯೋಜನೆ ಅನುಷ್ಟಾನ,  ರೈತರು ಬೆಳೆದ 14 ಉತ್ಪನ್ನಗಳಿಗೆ  ಉತ್ತಮ ಬೆಂಬಲ ಬೆಲೆಗಳನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ನೀಡಿದೆ.

ರೈತರು ಎಪಿಎಂಸಿ ಅಲ್ಲದೆ ಯಾವುದೇ ಮಾರುಕಟ್ಟೆಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಬಹುದಾಗಿದ್ದು, ಇದರಿಂದ ರೈತರಿಗೆ ಆದಾಯ ಹೆಚ್ಚಾಗುತ್ತದೆ. ಆದರೆ ರೈತರ ಸೋಗಿನಲ್ಲಿ ಕೃಷಿ ಕಾಯ್ದೆ ತಿದ್ದುಪಡಿ ವಿರೋಸುತ್ತಿರುವುದು ದುರದೃಷ್ಟಕರ. 540 ರೈತ ಸಂಘಟನೆಗಳಲ್ಲಿ ಬರೀ 42 ಸಂಘಟನೆಗಳು ಮಾತ್ರ ಈ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ್ದು, ಇದರಲ್ಲಿಯೂ 18 ಸಂಘಗಳು ಪ್ರತಿಭಟನೆಯಿಂದ ಹೊರಹೋಗಿವೆ. ಕೇಂದ್ರ ಕೃಷಿ ಸಚಿವರು 19 ಬಾರಿ ಸಭೆಗಳನ್ನು ನಡೆಸಿದ್ದಾರೆ ಎಂದರು.

ಹಿಂದಿನ ಯುಪಿಎ ಸರ್ಕಾರದಲ್ಲಿ ರೈತರ 65 ಸಾವಿರ ಕೋಟಿ ರೂ ಮನ್ನಾ ಮಾಡಿರುವುದನ್ನೇ ಪ್ರಸ್ತಾಪಿಸುವ ಕಾಂಗ್ರೆಸ್ಸಿಗರಿಗೆ, ಮೋದಿ ಅವರು 9 ಕೋಟಿ ರೈತರ ಖಾತೆಗೆ ಪ್ರತಿ ವರ್ಷ 6 ಸಾವಿರದಂತೆ 1.54 ಲಕ್ಷ ಕೋಟಿ ರೂ ಜಮಾ ಮಾಡಿರುವುದು ಅರ್ಥವಾಗುತ್ತಿಲ್ಲ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡಿರುವುದು ಕಾಣುತ್ತಿಲ್ಲ. ಮೋದಿ ಅವರ ಕೃಷಿ ನೀತಿಗಳು ಹಾಗೂ ಹಗರಣ ಮುಕ್ತ ಸರ್ಕಾರದಿಂದ ಕಾಂಗ್ರೆಸ್‍ಗೆ ಟೀಕಿಸಲೂ ಏನೂ ಸಿಗುತ್ತಿಲ್ಲ ಎಂದರು.

ತೈಲ ಬೆಲೆ 2013-14ರಲ್ಲಿಯೂ ಹೆಚ್ಚಾಗಿತ್ತು. ಈಗ ಕೊವಿಡ್ ಸಂಕಷ್ಟದಲ್ಲಿ ಆರ್ಥಿಕ ಪರಿಸ್ಥಿತಿ ಏರಿಳಿತಗಳಿಂದಾಗಿ ಅನಿವಾರ್ಯವಾಗಿ ತೈಲ ಬೆಲೆಗಳು ಹೆಚ್ಚಾಗಿದ್ದು, ಮುಂದೆ ಇಳಿಕೆ ಕಾಣುತ್ತವೆ. ಆದರೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸೈಕಲ್ ಏರಿ ಪೋಟೋ ತೆಗೆಸಿಕೊಂಡು ಪ್ರಚಾರದ ಗಿಮಿಕ್ ಮಾಡುತ್ತಿದ್ದಾರೆ. ಅವರಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಜನರ ಬಳಿಗೆ ಹೋಗಿ ಜನರ ಸಮಸ್ಯೆಗಳನ್ನು ಬಗೆಹರಿಸಲಿ ಎಂದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ರಾಗಿ ಸರಬರಾಜು ಮಾಡಿದ ರೈತರಿಗೆ ಹಣ ನೀಡುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು. ಇನ್ನು ಒಂದು ವಾರದಲ್ಲಿ ರೈತರಿಗೆ ಹಣ ಜಮಾ ಆಗಲಿದೆ ಎಂದರು.

ಸಭೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಚ್.ಎಂ.ರವಿಕುಮಾರ್,ಪ್ರಧಾನ ಕಾರ್ಯದರ್ಶಿಗಳಾದ  ಪುರುಷೋತ್ತಮ್, ಬಿ.ಕುಮಾರ್, ರೈತ ಮೋರ್ಚಾ ತಾಲೂಕು ಅಧ್ಯಕ್ಷ ಕೋಡಿ ನರಸಿಂಹಮೂರ್ತಿ, ಕಾರ್ಯದರ್ಶಿ ಲೋಕೇಶ್ವರಯ್ಯ, ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಆರ್.ಗೋಪಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಬಣ್ಣಿಸಿದರು. ಎನ್ ವಿಶ್ವನಾಥ್ “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500

[ccc_my_favorite_select_button post_id="111083"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ಚಿತ್ರೀಕರಣದ ವೇಳೆ ಅವಘಡ.. ಖ್ಯಾತ ಸ್ಟಂಟ್ ಮಾಸ್ಟರ್ ದುರ್ಮರಣ| Video

ಚಿತ್ರೀಕರಣದ ವೇಳೆ ಅವಘಡ.. ಖ್ಯಾತ ಸ್ಟಂಟ್ ಮಾಸ್ಟರ್ ದುರ್ಮರಣ| Video

ನಾಗಪಟ್ಟಣಂ: ದಕ್ಷಿಣ ಭಾರತದ ಖ್ಯಾತ ಸ್ಟಂಟ್ ಮಾಸ್ಟರ್ (Stunt Master) ಮೋಹನ್ ರಾಜ್ (Mohan Raj) ಸಿನಿಮಾ ಚಿತ್ರೀಕರಣದ ವೇಳೆ ನಿಧನರಾಗಿದ್ದಾರೆ. ಎನ್ ವಿಶ್ವನಾಥ್ ಸಿನಿಮಾ ಚಿತ್ರೀಕರಣ ವೇಳೆ ಕಾರು ಅಪಘಾತಗೊಂಡಿದ್ದು ಸ್ಟಂಟ್ ಮಾಸ್ಟರ್

[ccc_my_favorite_select_button post_id="111079"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!