ದೊಡ್ಡಬಳ್ಳಾಪುರ: ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಸಿ.ಅಶ್ವಥ್ ನಾರಾಯಣಗೌಡ ಅವರು ಶಾಸಕ ಟಿ.ವೆಂಕಟರಮಣಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಶಾಸಕ ಟಿ.ವೆಂಕಟರಮಣಯ್ಯ ಸ್ವಗೃಹದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇವರೊಂದಿಗೆ ಕಾಡನೂರು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ್, ಭೂ ನ್ಯಾಯ ಮಂಡಳಿ ಮಾಜಿ ಸದಸ್ಯ ಎನ್.ರಘು ಸಹ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..