ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ವೈರಾಣು ಸೋಂಕಿನಿಂದಾಗಿ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಡತನ ರೇಖೆಗಿಂತ ಕೆಳಗಿರುವ(ಬಿಪಿಎಲ್) ಕುಟುಂಬಕ್ಕೆ ಸರ್ಕಾರವು ಒಂದು ಲಕ್ಷ ರೂಪಾಯಿ ಆರ್ಥಿಕ ನೆರವನ್ನು ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರು ಅರ್ಜಿ ಸಲ್ಲಿಸಿ, ನೆರವು ಪಡೆಯಬಹುದುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಹಲವು ಕುಟುಂಬಗಳು ದುಡಿಯುವ ಸದಸ್ಯರನ್ನು ಕಳೆದುಕೊಂಡಿರುವ ಪ್ರತಿಯೊಂದು ಕುಟುಂಬಕ್ಕೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ಪರಿಹಾರವನ್ನು ಪಾವತಿಸಲಾಗುವುದು.ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯು ಕೋವಿಡ್-19 ನಿಂದಾದ ಮರಣಗಳನ್ನು ದೃಢಪಡಿಸಲು ನೀಡಿರುವ ಮಾನದಂಡಗಳ ಆಧಾರದ ಮೇಲೆ ದೃಢಪಡಿಸಿರುವಂತಹ ಸಾವಿನ ಪ್ರಕರಣಗಳಿಗೆ ಮಾತ್ರ ಪರಿಹಾರ ಮೊತ್ತವನ್ನು ಪಾವತಿಸಲಾಗುವುದು.
ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ ರೂ. 1 ಲಕ್ಷಗಳನ್ನು ಆರ್‌ಟಿಜಿಎಸ್(RTGS/NEFT) ಮೂಲಕ ನೇರವಾಗಿ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ (Website / Portal / App) ಮೂಲಕವೇ ನಿರ್ವಹಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..