ಕರೊನಾ ಪಿಡುಗಿನ ವಿರುದ್ದದ ಹೋರಾಟದಲ್ಲಿ ಭಾರತದ ಔಷಧ ಕ್ಷೇತ್ರದ ಕೊಡುಗೆ ಅಪಾರ: ಡಾ.ತೇಜಸ್ವಿನಿ ಅನಂತಕುಮಾರ್‌

ಬೆಂಗಳೂರು: ವಿ‍ಶ್ವದ ಲಸಿಕೆ ಉತ್ಪಾದನೆಯ ಶೇಡಕಾ 60 ರಷ್ಟು ಹಾಗೂ ಇನ್ನಿತರ ಔಷಧಗಳ ಉತ್ಪಾದನೆಯಲ್ಲಿ ಶೇಡಕಾ 49 ರಷ್ಟು ಕೊಡುಗೆಯನ್ನು ಹೊಂದಿರುವ ಭಾರತ ದೇಶದ ಔಷಧ ಕ್ಷೇತ್ರ ಕರೊನಾ ಪಿಡುಗಿನ ವಿರುದ್ದ ವಿಶ್ವದ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಅದಮ್ಯ ಚೇತನ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್‌ ಹೇಳಿದರು. 

ಭಾರತೀಯ ಔಷದ ವಲಯ ಎದುರಿಸುತ್ತಿರುವ ಸವಾಲುಗಳು ಹಾಗೂ ಅವಕಾಶಗಳ ಬಗ್ಗೆ ಅನಂತಕುಮಾರ್‌ ಪ್ರತಿಷ್ಠಾನದ “ದೇಶ ಮೊದಲು” ವೆಬಿನಾರ್‌ ಸರಣಿಯ 6 ಕಂತಿನಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಔಷದ ಉತ್ಪಾದನೆ ಹಾಗೂ ಸಂಶೋಧನೆಯ ಕ್ಷೇತ್ರಕ್ಕೆ ಬಹಳ ಅವಕಾಶಗಳು ಇವೆ. ಭಾರತ ದೇಶ ವಿಶ್ವದ ಔಷಧಾಲಯ ಎಂದೇ ಹೆಸರುವಾಸಿ,  ಕರೊನಾ ಸಾಂಕ್ರಾಮಿಕ ಪಿಡುಗಿನ ವಿರುದ್ದ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಹೇಳಿದರು. 

ರೆಡ್ಡಿ ಲ್ಯಾಬೋರೇಟರಿ ಸಿಇಓ (ಏಪಿಐ ಮತ್ತು ಸರ್ವೀಸಸ್‌) ದೀಪಕ್‌ ಸಪ್ರ ಮಾತನಾಡಿ, ಎಪಿಐ ಹಾಗೂ ಔಷಧ ಪ್ಯಾಕೇಜಿಂಗ್‌ ನಲ್ಲಿ ಹಲವಾರು ಸಮಸ್ಯೆಗಳನ್ನು ದೇಶ ಎದುರಿಸುತ್ತಿದೆ. ಆದರೆ ಅದನ್ನು ಹೊರತಪಡಿಸಿ ದೇಶ ಔಷಧ ಹಾಗೂ ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಹೊಸ ಔಷಧವನ್ನು ಸಿದ್ದಪಡಿಸುವಂತಹ ಆರ್ಥಿಕ ಸಾಮರ್ಥ್ಯವನ್ನು ನಮ್ಮ ದೇಶದ ಬಹಳಷ್ಟು ಕಂಪನಿಗಳು ಹೊಂದಿಲ್ಲ. ಆದರೆ ಸಂಶೋಧನೆ ಆಗಿರುವ ಔಷಧಗಳ ಉತ್ಪಾದನೆಯಲ್ಲಿ ಬಹಳಷ್ಟು ಮುಂಚೂಣಿಯಲ್ಲಿದ್ದೇವೆ. ಜೆನೆರಿಕ್‌ ಔಷಧಗಳು, ಬ್ರಾಂಡೆಡ್‌ ಔಷಧಗಳಷ್ಟೇ ಪರಿಣಾಮಕಾರಿಯಾಗಿವೆ ಎಂದು ಹೇಳಿದರು. 

ಐಕ್ಯೂಜಿಇಎನ್‌-ಎಕ್ಸ್‌ ಫಾರ್ಮಾ ಪ್ರೈ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಸಿಇಓ ಮಂದಾರ ಕೊಡಗುಲೆ ಮಾತನಾಡಿ, ಅಮೇರಿಕಾದಂತಹ ಮುಂದುವರೆದ ರಾಷ್ಟ್ರಗಳಲ್ಲಿ ದೊರೆಯುವ ಔಷಧ ಗುಣಮಟ್ಟ ಹಾಗೂ ಅದಕ್ಕಾಗಿ ಅನುಸರಿಸಲಾಗುವಂತಹ ಮಾನದಂಡಗಳು ನಮ್ಮ ದೇಶದಲ್ಲಿಯೂ ಅನುಸರಿಸಬೇಕು. ಹೊಸ ಔಷಧ ಸಂಶೋಧನೆ ಗೆ ಸುಮಾರು 10 ರಿಂದ 12 ವರ್ಷಗಳ ಸಮಯ ಬೇಕು, ಅದಕ್ಕೆ ಬೇಕಾದ ಹಣಕಾಸು ಬಹಳ. ಈ ನಿಟ್ಟಿನಲ್ಲಿ ಸರಕಾರಗಳು ಹಾಗೂ ಇನ್ವೆಸ್ಟ್ ಮೆಂಟ್ ಸಂಸ್ಥೆಗಳು ಸಹಕಾರ ನೀಡಬೇಕು. ಔಷಧ ಉತ್ಪಾದನೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವುದರಿಂದ ಔಷಧದ ಬೆಲೆ ಹೆಚ್ಚಾಗುತ್ತದೆ ಎನ್ನುವುದು ಸರಿಯಾದ ತರ್ಕವಲ್ಲ. ದೇಶದಲ್ಲಿ ಬಳಸಲಾಗುತ್ತಿರುವ ಬ್ರಾಂಡೆಡ್‌ ಔಷಧಗಳ ಬೆಲೆ ಅವುಗಳ ಬ್ರಾಂಡ್‌ಗಳ ಮೇಲೆ ವ್ಯಯ ಮಾಡುವ ಹಣದಿಂದ ಹೆಚ್ಚಾಗುತ್ತಿವೆ ಎಂದು ಅಭಿಪ್ರಾಯಪಟ್ಟರು. 

ಕಾರ್ಯಕ್ರಮದಲ್ಲಿ ಅನಂತಕುಮಾರ್‌ ಪ್ರತಿಷ್ಠಾನದ ಅಧ್ಯಕ್ಷ ಪ್ರೋ.ಪಿ.ವಿ.ಕೃಷ್ಣ ಭಟ್‌,  ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿಗಳಾದ ಪ್ರದೀಪ್‌ ಓಕ್‌, ಐಶ್ವರ್ಯ ಅನಂತಕುಮಾರ್, ಡಾ.ಸಮೀರ್ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಸುಮಾರು 400 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!