ಕರೊನಾ ಮೂರನೇ ಅಲೆಯನ್ನು ಎದುರಿಸಲು ಕೇಂದ್ರ ಸರಕಾರದಿಂದ 1500 ಕೋಟಿ: ಸಚಿವ ಸುಧಾಕರ್‌

ಬೆಂಗಳೂರು: ದೇಶದಲ್ಲಿ ಸಂಭವನೀಯ ಮೂರನೇ ಅಲೆಯ ನಿರ್ವಹಣೆಗೆ ಕೇಂದ್ರ ಸರಕಾರದಿಂದ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆತಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಹೇಳಿದರು.

ಜಯನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುನೈಟೆಡ್‌ ಆಸ್ಪತ್ರೆಯಲ್ಲಿ ಕರೊನಾ ಲಸಿಕಾ ವಿತರಣೆಯ ಕಾರ್ಯಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು.

ಯುವ ವೈದ್ಯರ ತಂಡ ಕಲಬುರಗಿಯಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ಬೆಂಗಳೂರಿನಲ್ಲೂ ಆಸ್ಪತ್ರೆಯನ್ನು ಪ್ರಾರಂಭಿಸಿರುವುದು ಬಹಳ ಸಂತಸದ ವಿಷಯ. ಕರೊನಾ ಸಾಂಕ್ರಾಮಿಕ ಹೆಚ್ಚಾಗಿದ್ದಾಗ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ಉಂಟಾಗಿತ್ತು. ಆ ಸಮಯದಲ್ಲಿ ಖಾಸಗಿ ಆಸ್ಪತ್ರೆಗಳು ನೀಡಿದ ಸಹಕಾರ ಬಹಳ ಶ್ಲಾಘನೀಯ.

ಕಲಬುರಗಿ ಜಿಲ್ಲಾ ಕೇಂದ್ರದಲ್ಲಿ ಯುನೈಟೆಡ್‌ ಆಸ್ಪತ್ರೆ ಸಾವಿರಾರು ಕರೊನಾ ಪೀಡಿತರಿಗೆ ಉತ್ತಮ ಚಿಕಿತ್ಸೆ ನೀಡಿದೆ. ರಾಜ್ಯ ಸರಕಾರ ದೇಶದಲ್ಲೇ ರಾಜ್ಯವನ್ನು ಆರೋಗ್ಯ ಕ್ಷೇತ್ರದಲ್ಲಿ ಮಾಧರಿ ರಾಜ್ಯವನ್ನಾಗಿಸಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಈ ವಿಷಯದಲ್ಲಿ ಸಫಲತೆಯನ್ನು ಪಡೆಯಲು ಖಾಸಗಿ ಆಸ್ಪತ್ರೆಗಳ ಸಹಕಾರ ಬಹಳ ಅಗತ್ಯ ಎಂದರು.

ಕೇಂದ್ರ ಸರಕಾರ ಇತ್ತೀಚಿನ ಸಚಿವ ಸಂಫುಟ ಸಭೆಯಲ್ಲಿ ಮುಂದಿನ ಸಂಭವನೀಯ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಈ ಹಣದಲ್ಲಿ ರಾಜ್ಯಕ್ಕೆ 1500 ಕೋಟಿ ರೂಪಾಯಿಗಳ ನೆರವು ದೊರೆಯಲಿದ್ದು, ರಾಜ್ಯದಲ್ಲಿ ಮಕ್ಕಳ ವಿಭಾಗದ ಸಾಮರ್ಥ್ಯವನ್ನು ಹೆಚ್ಚಿಸಲು ಬಳಸಿಕೊಳ್ಳಲಾಗುವುದು. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮೂರನೇ ಅಲೆಗೆ ಅಗತ್ಯವಿರುವ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಜಯನಗರ ಭಾಗದಲ್ಲಿ ಮತ್ತೊಂದು ನೂತನ ಆಸ್ಪತ್ರೆ ಪ್ರಾರಂಭವಾಗುತ್ತಿರುವುದು ಬಹಳ ಸಂತಸದ ವಿಷಯ. ಕರೋನಾ ಸಂಕಷ್ಟ ಕಾಲದಲ್ಲಿ ಆಸ್ಪತ್ರೆ ಸೌಲಭ್ಯಗಳ ದೊರೆಯದೆ ಇದ್ದಂತಹ ಸಂಧರ್ಭದಲ್ಲಿ ಇದರ ಮಹತ್ವವನ್ನು ನಾವು ತಿಳಿದುಕೊಂಡಿದ್ದೇವೆ. ಹೆಲ್ತ್‌ ಕಾರ್ಡ್ ಗಳ ಮೂಲಕ ಹಾಗೂ ನಿರ್ದಿಷ್ಟ ದರವನ್ನು ನಿಗದಿಪಡಿಸುವ ಮೂಲಕ ಉತ್ತಮ ಸೇವೆಯನ್ನು ನೀಡುವ ಭರವಸೆಯನ್ನು ಇಲ್ಲಿನ ವೈದ್ಯಕೀಯ ಮಂಡಳೀ ನೀಡಿರುವುದು ಸಂತಸದ ವಿಷಯ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಮಾತನಾಡಿ, ಯುನೈಟೆಡ್‌ ಆಸ್ಪತ್ರೆ ಕಲಬುರಗಿಯಲ್ಲಿ ಹಾಗೂ ಹೈದ್ರಬಾದ್‌ ಕರ್ನಾಟಕ ಭಾಗದಲ್ಲಿ ಕರೋನಾ ಸಾಂಕ್ರಾಮಿಕ ಸಂಧರ್ಭದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದೆ. ಬೆಂಗಳೂರು ಹೊರತುಪಡಿಸಿ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಿದ ರಾಜ್ಯದ ಮೊದಲ ಖಾಸಗಿ ಆಸ್ಪತ್ರೆ ಎನ್ನುವುದು ಇದರ ಹೆಗ್ಗಳಿಕೆ. ಚಿಕಿತ್ಸೆ ಮೊದಲು ಎನ್ನುವ ಧ್ಯೇಯ ವಾಕ್ಯದ ಮೂಲಕ ಉತ್ತಮ ಚಿಕಿತ್ಸೆಯನ್ನು ಯುನೈಟೆಡ್‌ ಆಸ್ಪತ್ರೆಯ ತಂಡ ನೀಡಿರುವುದು ಬಹಳ ಸಂತಸದ ವಿಷಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಗಳಖೋಡ-ಜಿಡಗಾ ಮಠದ ಪೀಠಾಧಿಪತಿಗಳಾದ ಪರಮ ಶ್ರೀ ಷಡಕ್ಷರಿ ಶಿವಯೋಗಿ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌, ಯುನೈಟೆಡ್‌ ಆಸ್ಪತ್ರೆಯ ಸಿಎಂಡಿ ಡಾ.ವಿಕ್ರಮ್‌ ಸಿದ್ದಾರೆಡ್ಡಿ, ಮಾಜಿ ಕೇಂದ್ರ ಸಚಿವೆ ರಾಣಿ ಸತೀಶ್‌, ಮಾಜಿ ಸಚಿವೆ ಪಿಜಿಆರ್‌ ಸಿಂಧ್ಯಾ, ಶಾಸಕ ಪಿ ರಾಜೀವ, ಯುನೈಟೆಡ್‌ ಆಸ್ಪತ್ರೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಶಾಂತಕುಮಾರ್‌ ಮುರುಡಾ, ಆಸ್ಪತ್ರೆಯ ನಿರ್ದೇಶಕಿ ಡಾ.ವೀಣಾ ವಿಕ್ರಮ್‌ ಸಿದ್ಧಾರೆಡ್ಡಿ ಹಾಗೂ ಡಾ.ರಾಜೀವ್‌ ಬಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ದೊಡ್ಡಬಳ್ಳಾಪುರ: 134 ಎಕರೆ ಜಮೀನಿನಲ್ಲಿ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ ಮತ್ತೆ ಆರಂಭ..?

ಬೆಳಗಾವಿ: ಬಿಬಿಎಂಪಿ (BBMP) ತ್ಯಾಜವಿಲೇವಾರಿ ಘಟಕದಿಂದ ದೊಡ್ಡಬಳ್ಳಾಪುರ ತಾಲೂಕಿನ ಜನತೆ ನೆಮ್ಮದಿ ಕಳೆದುಕೊಂಡಿರುವ ಬೆನ್ನಲ್ಲೇ, ಗುಂಡ್ಲಹಳ್ಳಿ ಸಮೀಪ 134.10 ಎಕರೆ ಜಮೀನಿನಲ್ಲಿ ಮತ್ತೆ ಟೆರಾಫಾರ್ಮ ತ್ಯಾಜ್ಯ ವಿಲೇವಾರಿ ಘಟಕ (Terraforma Waste Disposal Unit)

[ccc_my_favorite_select_button post_id="117199"]
23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಕ್ಕೆ ತಲಾ ರೂ.5ಲಕ್ಷ ಅನುದಾನ ಬಿಡುಗಡೆ: ಎಚ್.ಕೆ.ಪಾಟೀಲ್

23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ (H.K. Patil) ಹೇಳಿದರು.

[ccc_my_favorite_select_button post_id="117203"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

"ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="117115"]
ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು ಸೇರಿ 3 ಕಡೆ ಮಾಂಗಲ್ಯ ಸರ ಕಳವು

ಮಹಿಳೆಯರೆ ಎಚ್ಚರ: ಬಾಲ ಬಿಚ್ಚಿದ ಸರಗಳ್ಳರು‌‌.. 24 ಗಂಟೆ ಅಂತರದಲ್ಲಿ ದೊಡ್ಡಬಳ್ಳಾಪುರ ತಾಲೂಕು

ಕೆಲ ದಿನಗಳಿಂದ ಸದ್ದಡಗಿದ್ದ ಸರ ಕಳ್ಳರ ಹಾವಳಿ ತಾಲೂಕಿನಲ್ಲಿನ ಮತ್ತೆ ಕೇಳಿ ಬಂದಿದ್ದು, 24 ಗಂಟೆ ಅವಧಿಯಲ್ಲಿ ದೊಡ್ಡಬಳ್ಳಾಪುರದ ಎರಡು ಕಡೆ ಮಾಂಗಲ್ಯ ಸರ (Mangalya chain) ಕಳ್ಳತನ (Theft) ನಡೆದಿರುವುದು ವರದಿಯಾಗಿದೆ.

[ccc_my_favorite_select_button post_id="117099"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ ಎಂದು ವಿಜಯಲಕ್ಷ್ಮಿ ದರ್ಶನ್ ಕಿಡಿ

ಸಿನಿಮಾ ಬಿಡುಗಡೆ ವೇಳೆ ದರ್ಶನ್ ವಿರುದ್ಧ ಮಾಧ್ಯಮಗಳ ಸುಳ್ಳು ಸುದ್ದಿ: ಇದೇನಾ..? ಪತ್ರಿಕೋದ್ಯಮ

ಅಭಿಮಾನಿಗಳ ದಾಸ, ಚಾಲೆಂಜಿಗ್ ಸ್ಟಾರ್ ದರ್ಶನ್ (Darshan) ಅಭಿನಯದ, ಪ್ರಕಾಶ್ ವೀರ್ ನಿರ್ದೇಶನದ ''ದಿ ಡೆವಿಲ್' (The Devil) ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

[ccc_my_favorite_select_button post_id="117208"]
error: Content is protected !!