ಚಿಕ್ಕಮಗಳೂರು: ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಹೆಗ್ಗರವಳ್ಳಿಯ ಮೂಲದವರಾದ ಸುನಿಲ್,ಗೋಣಿಬೀಡು ಆಸ್ಪತ್ರೆಯಲ್ಲಿ ಹೃದಯಘಾತದಿಂದ ಕೊನೆಯುಸಿರೆಳಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತ ದಿ.ರವಿ ಬೆಳಗೆರೆ ನೆಚ್ಚಿನ ಶಿಷ್ಯನಾಗಿದ್ದ ಹಿರಿಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ, ಸ್ವಂತ ಪತ್ರಿಕೆಯೊಂದನ್ನು ನಡೆಸುತ್ತಿದ್ದರು. ಅವರು ಅಪಾರ ಪತ್ರಕರ್ತ ಬಂಧುಗಳನ್ನು, ಸ್ನೇಹಿತರನ್ನು ಹಾಗೂ ಮನೆಯವರನ್ನು ಅಗಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..