ದೊಡ್ಡಬಳ್ಳಾಪುರ: ರಾಜ್ಯದ ಪ್ರಥಮ ಬಾರಿಗೆ ತಜ್ಞ ಮಕ್ಕಳ ವೈದ್ಯರ ನಡೆ ಹಳ್ಳಿ ಕಡೆ ಎಂಬ ವಿನೂತನ ಕಾರ್ಯಕ್ರಮದ ಅಂಗವಾಗಿ ಇಂದು ತಾಲೂಕಿನ ಆರೂಢಿ ಗ್ರಾಮದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯಿತಿ ಸದಸ್ಯ ತಿಪ್ಪರಾಜು ನೆರವೇರಿಸಿದರು. ಈ ವೇಳೆ ನೂರಕ್ಕು ಹೆಚ್ಚು ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.
ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಿದ್ದರಾಮಪ್ಪ, ಅನುದಾನಿತ ಪ್ರೌಢಶಾಲೆಯ ಶಿಕ್ಷಕ ಗೋಪಾಲ್ ನಾಯಕ್, ವೈದ್ಯರಾದ ಡಾ.ರುದ್ರಪ್ಪ, ಡಾ.ಸಂಜನ, ಡಾ.ಶಬಾಝ್, ಅಂಗನವಾಡಿ ಕಾರ್ಯಕರ್ತೆಯರಾದ ಸುವರ್ಣಮ್ಮ, ಶಕುಂತಲಮ್ಮ, ಆಶಾ ಕಾರ್ಯಕರ್ತೆಯರಾದ ಗಾಯತ್ರಮ್ಮ, ಶಾಂತಮ್ಮ ಮತ್ತಿತರಿದ್ದರು.
ಈ ಕಾರ್ಯಕ್ರಮದ ಅಂಗವಾಗಿ ಮಕ್ಕಳ ವೈದ್ಯರೇ ನೇರವಾಗಿ ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದಾರೆ ಹಾಗೂ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ ಅವರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ತಾಲೂಕಿನಾಧ್ಯಂತ ವೈದ್ಯರ ತಂಡ ಸಂಚರಿಸುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..