ಚಿಕ್ಕಬಳ್ಳಾಪುರ: ವಿಕೇಂಡ್ ನಲ್ಲಿ ಸಾವಿರಾರು ಮಂದಿ ಪ್ರವಾಸಿಗರ ಆಗಮನ ಹಿನ್ನಲೆ ಶನಿವಾರ-ಭಾನುವಾರ ನಂದಿಗಿರಿಧಾಮ ಕಂಪ್ಲೀಟ್ ಲಾಕ್‍ಡೌನ್ ಮಾಡಲಾಗಿದೆ.
ಕಳೆದ ವಿಕೇಂಡ್ ಸಾವಿರಾರು ಮಂದಿ ಪ್ರವಾಸಿಗರು ಆಗಮಿಸಿದ್ದ ಕಾರಣ, ಕರೊನಾ ವ್ಯಾಪಿಸುವ ಆತಂಕ ಎದುರಾಗಿತ್ತು.
ಈ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ನಿರ್ದೇಶನದಂತೆ, ಚಿಕ್ಕಬಳ್ಳಾಪುರ ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್ ವಿಕೇಂಡ್ ವೇಳೆಯಲ್ಲಿ ನಂದಿಗಿರಿಧಾಮ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.
ಲಾಕ್ ಡೌನ್ ಆದೇಶ ಅನ್ವಯ ಮುಂದಿನ ಆದೇಶದ ವರೆಗೂ ಶನಿವಾರ-ಭಾನುವಾರ ನಂದಿಗಿರಿಗೆ ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಮಾಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..