ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಹೋಬಳಿಯಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.
ಈ ವೇಳೆ ಕೃಷಿ ಅಧಿಕಾರಿ ಸಿದ್ದಲಿಂಗಯ್ಯ ಮಾತನಾಡಿ, ಕೃಷಿ ಮತ್ತು ಎಲ್ಲಾ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಕೃಷಿ ಮಾಹಿತಿಯನ್ನು ನೀಡುವ ಸಲುವಾಗಿ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ “ಎಂಬ ಶೀರ್ಷಿಕೆಯಡಿ ಈ ಕಾರ್ಯಕ್ರಮ ಅಯೋಜಿಸಲಾಗಿದೆ.
ಸದರಿ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಸಾಸಲು ಹೋಬಳಿಯ ಎಲ್ಲಾ ಗ್ರಾಮಪಂಚಾಯಿತಿಗಳನ್ನು ಒಳಗೊಂಡಂತೆ ಜುಲೈ 13ರಿಂದ 15ರವರೆಗೆ ವ್ಯಾಪಕ ಪ್ರಚಾರದ ಕಾರ್ಯದ ಜೊತೆಗೆ ವಿಜ್ಞಾನಿಗಳು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡಂತೆ ತಂಡಗಳು ರೈತರಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಪ್ರಚಾರದ ಮೊದಲನೇ ದಿನವಾದ ಇಂದು ಸಾಸಲು ಹೋಬಳಿಯ ಭಕ್ತರಹಳ್ಳಿ ಹಾಗೂ ಸಾಸಲು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.
ಭಕ್ತರಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಧ್ಯಕ್ಷ ಬಿ.ಆರ್.ಸಿದ್ದಲಿಂಗಯ್ಯ, ಉಪಾಧ್ಯಕ್ಷೆ ಹೇಮಾಮಾಲಿನಿ, ಕೃಷಿಕ ಸಮಾಜದ ಸದಸ್ಯ ಅಶ್ವಥನಾರಾಯಣಸ್ವಾಮಿ, ಪಿಡಿಒ ತ್ರಿವೇಣಿ. ಸಾಸಲು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಧ್ಯಕ್ಷ ಮಾರೇಗೌಡ, ಉಪಾಧ್ಯಕ್ಷ ಆನಂದ್, ಪಿಡಿಒ ತಿರುಪತಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಕೃಷಿ ಇಲಾಖೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ದಶರಥ, ತೋಟಗಾರಿಕೆ ಇಲಾಖೆಯ ಅಧಿಕಾರಿ ಶಶಿಕುಮಾರ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..