ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಕನ್ನಡ ಭಾಷೆಗೆ ಅವಕಾಶ ನೀಡದ ಕುರಿತು ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಅವರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯದೊರಕಿಸಿಕೊಡಬೇಕು ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.

2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು.

ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ  ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!