ದೊಡ್ಡಬಳ್ಳಾಪುರ: ತಾಲ್ಲೂಕಿನ ಮೆಳೇಕೋಟೆ ವ್ಯಾಪ್ತಿಯ ಪ್ರಭಾವಿ ರಾಜಕಾರಣಿ ಆರ್.ಚಿದಾನಂದ್ ಮತ್ತೆ ಪಕ್ಷ ಬದಲಿಸಿದ್ದಾರೆ.
ಮೆಳೇಕೋಟೆ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷದ ಪ್ರಭಾವಿ ರಾಜಕಾರಣಿ ಎನಿಸಿದ್ದ ಇವರು, ಸಂಸತ್ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದರು.
ಆದರೆ ದಿಢೀರ್ ಬೆಳವಣಿಗೆಯಲ್ಲಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ವೇಳೆ ಈ ವ್ಯಾಪ್ತಿಯ ಹಲವು ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಹ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಶಾಸಕ ಟಿ.ವೆಂಕಟರಮಣಯ್ಯ, ಕಾಂಗ್ರೆಸ್ ತೂಬಗೆರೆ ಬ್ಲಾಕ್ ಸಮಿತಿ ಅಧ್ಯಕ್ಷ ಜಿ.ರಂಗಪ್ಪ, ವಿಧಾನ ಪರಿಷತ್ ಸದಸ್ಯ ಎಸ್. ರವಿ, ದೇವನಹಳ್ಳಿ ಬ್ಲಾಕ್ ಅಧ್ಯಕ್ಷ ಪ್ರಸನ್ನಕುಮಾರ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..