ದೊಡ್ಡಬಳ್ಳಾಪುರದಲ್ಲಿ ಸಮಾರೋಪ ಕಂಡ “ಮಕ್ಕಳ ತಜ್ಞರ ನಡೆ ಹಳ್ಳಿಯ ಮಕ್ಕಳ ಕಡೆಗೆ” ಕಾರ್ಯಕ್ರಮ / ವೈದ್ಯಕೀಯ ಸಿಬ್ಬಂದಿಗೆ ಪ್ರಶಂಸೆ ಪತ್ರ ವಿತರಿಸಿದ ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕೋವಿಡ್-19 ಮೂರನೇ ಅಲೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಜಾರಿಗೊಳಿಸಲಾದ “ಮಕ್ಕಳ ತಜ್ಞರ ನಡೆ ಹಳ್ಳಿಯ ಮಕ್ಕಳ ಕಡೆಗೆ” ಕಾರ್ಯಕ್ರಮ 28 ದಿನಗಳ ನಂತರ ಸಮಾರೋಪಗೊಂಡಿದೆ.

ಈ ತಂಡ ತಾಲೂಕಿನ ಗ್ರಾಮಗಳಿಗೆ ತೆರಳಿಗೆ 31233 ಮಕ್ಕಳನ್ನು ತಪಾಸಣೆ ನಡೆಸಿದ್ದು, ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಕಿಟ್ ವಿತರಿಸಿದೆ.

ಮಂಗಳವಾರ ನಗರದ ಕೋವಿಡ್ ವಾರ್ ರೂಂ ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾದ ವೈದ್ಯಕೀಯ ತಂಡಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಪ್ರಶಂಸೆ ಪತ್ರ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು,ತಾಲ್ಲೂಕಿನಲ್ಲಿ ಮಕ್ಕಳ ತಪಾಸಣೆ ಮಾಡಿ ಅವರ ಸ್ಥಿತಿಗತಿಯ ಬಗ್ಗೆ ವರದಿ ನೀಡಿದ್ದರಿಂದ ಮುಂದಿನ ಕ್ರಮ ವಹಿಸಲು ಅನುಕೂಲವಾಗಲಿದೆ. ಗುರುತಿಸಲಾದ ಅಪೌಷ್ಟಿಕ ಮಕ್ಕಳನ್ನು ಸ್ಥಳೀಯ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಕ ಅನುಪಾಲನೆ ಮಾಡಲು ಸೂಚಿಸಿದರು. ಅಲ್ಲದೆ ಹೃದಯ ಸಂಬಂಧಿ, ಕಿಡ್ನಿ ಸಂಬಂಧಿತ ಹಾಗೂ ಇತರೆ ಖಾಯಿಲೆಗಳ ಹೆಚ್ಚಿನ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ಕೊಡಿಸಲು ಬೆಂಗಳೂರಿನ ಆಸ್ಪತ್ರೆಗಳಿಂದ ವಿಶೇಷ ತಜ್ಞರ ಶಿಬಿರ ಆಯೋಜಿಸಲು ಸೂಚಿಸಿದರು. ವೈದ್ಯರು, ಸಿಬ್ಬಂದಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ನಿರ್ಭಯವಾಗಿ ಕೆಲಸ ಮಾಡುವಂತೆ ಸೂಚಿಸಿದರು.

ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ,  ಕೋವಿಡ್ ಸಂದರ್ಭವು ನಮಗೆ ಜೀವನದ ವಾಸ್ತವತೆಯ ಅರಿವು ಮೂಡಿಸಿದೆ. ವಚನದಲ್ಲಿ ಹೇಳಿರುವಂತೆ ಕಾಲಿಗೆ ಗುಂಡು ಕತ್ತಿಗೆ ಬೆಂಡು ಕಟ್ಟಿದಂತೆ, ಗುಂಡು ಮುಳುಗಿಸುತ್ತಿರುತ್ತದೆ.. ಬೆಂಡು ತೇಲಿಸುತ್ತಿರುತ್ತದೆ.. ಕೋವಿಡ್ ನಲ್ಲಿ ಜನ ಜೀವನ ಇತ್ತ ಮುಳುಗದೆ, ಅತ್ತ ಏಳದೆ ಸಂದಿಗ್ದ ಪರಿಸ್ಥಿತಿಯನ್ನು ನಮಗೆಲ್ಲರಿಗೂ ತಂದೊಡ್ಡಿದೆ. ಕೋವಿಡ್ ನಿರ್ವಹಣೆಯಲ್ಲಿ ಶಾಸಕರ ಸಹಕಾರ ಮಾರ್ಗದರ್ಶನ ಅಪಾರವಾಗಿದ್ದು, ಯೋಜನೆಯಲ್ಲಿ ಪಾಲ್ಗೊಂಡ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿಗಳ ಪಾತ್ರ ಪ್ರಶಂಸನೀಯ ಎಂದರು.

ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!