ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತ ಯಂತ್ರಗಳ ಉಗ್ರಾಣ ಕಟ್ಟಡಕ್ಕೆ ಇಂದು ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಸಂಜೀವ್ ಕುಮಾರ್, ಭಾರತ ಚುನಾವಣಾ ಆಯೋಗದ ಉಪ ಆಯುಕ್ತರಾದ ನಿತೇಶ್ ವ್ಯಾಸ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಂತರ ಕಟ್ಟಡದ ಆವರಣದಲ್ಲಿ ಗಿಡವನ್ನು ನೆಟ್ಟು, ನೀರೆರೆದರು. ಚುನಾವಣಾ ಆಯೋಗದ ಜಂಟಿ ಆಯುಕ್ತರಾದ ರಾಘವೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೋಲಿಸ್ ಅಧೀಕ್ಷಕ ಡಾ.ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕ ರಾಜೀವಲೋಚನ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..