ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿ ಬಿಜೆಪಿ ಅಧ್ಯಕ್ಷರನ್ನಾಗಿ ಸಿ.ಎಸ್.ಅನಿಲ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿತ್ತು.
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಆಯ್ಕೆ ಪತ್ರವನ್ನು ತಾಲೂಕು ಬಿಜೆಪಿ ಅಧ್ಯಕ್ಷ ಟಿ.ಎನ್.ನಾಗರಾಜು ವಿತರಿಸಿದರು.
ಇದೇ ವೇಳೆ ತಾಲೂಕು ಘಟಕದ ಉಪಾಧ್ಯಕ್ಷರಾಗಿ ಮಧುಸೂದನ್, ಮಧುರೆ ಹೋಬಳಿ ಪ್ರಧಾನ ಕಾರ್ಯದರ್ಶಿಯಾಗಿ ರವೀಂದ್ರ, ಕಾರ್ಯದರ್ಶಿಯಾಗಿ ಆರ್.ನಟರಾಜು ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಹೆಚ್.ಎಸ್. ಶಿವಶಂಕರ್, ಪ್ರಧಾನ ಕಾರ್ಯದರ್ಶಿಗಳಾದ ಕಾಂತರಾಜ್, ಶಿವಾನಂದ ರೆಡ್ಡಿ, ಎಸ್ ಸಿ ಮೋರ್ಚಾದ ಅಧ್ಯಕ್ಷ ದೇವರಾಜ್, ಓಬಿಸಿ ಮೋರ್ಚಾದ ಚಂದ್ರಶೇಖರ್, ಮುನಿ ಕೃಷ್ಣಪ್ಪ, ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯರಾದ ಎನ.ಆರ್.ಮನು, ನಾಗರಾಜು, ಯುವಮೋರ್ಚಾ ಅಧ್ಯಕ್ಷ ಕೀರಣ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಮ್ಜತ್ ಪಾಷ, ಮುಖಂಡರಾದ ಮುನಿಕೃಷ್ಣಪ್ಪ, ಮಂಜುನಾಥ್, ಟಿ.ಜಿ.ಮಂಜುನಾಥ್, ತಾಲ್ಲೂಕು ವಕ್ತಾರ ಸಿ.ನಾಗರಾಜು ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..