ಸುಬ್ರಹ್ಮಣ್ಯ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಬುಧವಾರ ಸಂಪೂರ್ಣ ಮುಳುಗಡೆ ಗೊಂಡಿದ್ದು, ಕ್ಷೇತ್ರಕ್ಕೆ ಆಗಮಿಸಿದ ಭಕ್ತಿರಿಗೆ ನದಿ ದಡದಲ್ಲಿ ತೀರ್ಥ ಸ್ನಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಸುಬ್ರಹ್ಮಣ್ಯ ಹಾಗೂ ಘಟ್ಟ ಪ್ರದೇಶದಲ್ಲೂ ಮಳೆಯಾಗುತ್ತಿದೆ. ಕುಮಾರಧಾರ ಸೇತುವೆಯ ಕೆಳ ಭಾಗದ ಕಿಂಡಿ ಅಣೆಕಟ್ಟು ಹಾಗೂ ಸ್ನಾನ ಘಟ್ಟ ನೀರಿನಿಂದ ಜಲಾವೃತಗೊಂಡಿದೆ.
ಆದಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ನದಿಯಲ್ಲೂ ನೀರಿನ ಮಟ್ಟ ಹೆಚ್ಚಳ ಗೊಂಡಿದೆ. ನದಿಯ ದಡದಲ್ಲಿ ಸುಬ್ರಹ್ಮಣ್ಯ ಠಾಣಾ ಪೊಲೀಸರು, ಗೃಹ ರಕ್ಷಕ ದಳದ ಸಿಬ್ಬಂದಿಗಳು ಕಾವಲು ವ್ಯವಸ್ಥೆಗೆ ಕರ್ತವ್ಯಕ್ಕೆ ನೇಮಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..