ದೊಡ್ಡಬಳ್ಳಾಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನೂತನ ಸದಸ್ಯರಾಗಿ ಕುಕ್ಕಲಹಳ್ಳಿ ಕೃಷ್ಣಮೂರ್ತಿ ಅವರನ್ನು ನಾಮನಿರ್ದೇಶನಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎಸ್.ಮಂಜುನಾಥ್ ಅಧಿಸೂಚನೆ ಹೊರಡಿಸಿದ್ದಾರೆ.
ಇದಕ್ಕೂ ಮುನ್ನ 2020ರ ಜೂನ್ 2 ರಂದು ನಾಮನಿರ್ದೇಶನಗೊಂಡಿದ್ದ ಎಂ.ಸಿದ್ದಲಿಂಗಯ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
ನೂತನ ಸದಸ್ಯರಾಗಿ ನಾಮನಿರ್ದೇಶನಗೊಂಡ ಕೃಷ್ಣಮೂರ್ತಿ ಅವರನ್ನು ತಾಲೂಕುಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಅಭಿನಂದಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..