ಬೆಂಗಳೂರು: 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದೆ.
ವಿದ್ಯಾರ್ಥಿಗಳ ಅಗತ್ಯತೆಗಳನ್ನು ಮನಗಂಡು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆ.
ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ತೆರಳಲು ಉಚಿತ ಸಾರಿಗೆ ವ್ಯವಸ್ಥೆ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪ್ರದೇಶದಲ್ಲಿ ನಿಲುಗಡೆ ನೀಡಲು ಸೂಚಿಸಲಾಗಿದೆ.
ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಕಡ್ಡವಾಗಿ ಹಾಲ್ ಟಿಕೆಟ್ ನ್ನು ತಮ್ಮ ಜೊತೆ ಕೊಂಡೊಯ್ಯಬೇಕು ಎಂದು ದೊಡ್ಡಬಳ್ಳಾಪುರ ಕೆಎಸ್ ಆರ್ ಟಿಸಿ ಡಿಪೋ ವ್ಯವಸ್ಥಾಪಕ ಅನಂದ್ ಹೇಳಿದ್ದಾರೆ.
ಜುಲೈ 19 ರಿಂದ 22 ವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..