ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಬೆಂಗಳೂರು, ಮೈಸೂರು, ಮಡಿಕೇರಿ, ಮೂಡಬಿದ್ರೆ, ಶಿವಮೊಗ್ಗ, ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ರಾಜ್ಯದಲ್ಲಿ ತರಬೇತಿ ಸಂಸ್ಥೆಗಳನ್ನು ನಡೆಸುತ್ತಿದ್ದು, ಈ ಸಂಸ್ಥೆಯ ಮೂಲಕ 6 ತಿಂಗಳು 180 ದಿನಗಳ ಅವಧಿಯ ಡಿಪ್ಲೊಮಾ ಇನ್-ಕೋ-ಆಪರೇಟಿವ್ ಮ್ಯಾನೆಜ್‍ಮೆಂಟ್ ತರಬೇತಿಯನ್ನು 2021 ರ ಜುಲೈಯಿಂದ ಪ್ರಾರಂಭಿಸುತ್ತಿದ್ದು, ತರಬೇತಿಯನ್ನು ಪಡೆಯಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯುವ ಅಭ್ಯರ್ಥಿಗಳು ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತ ಅವಕಾಶವನ್ನು ಕಲ್ಪಿಸಲಾಗಿದ್ದು, ವಯೋಮಿತಿ ಕನಿಷ್ಟ 16 ವರ್ಷ ಆಗಿರಬೇಕು.

ಸಹಕಾರ ಸಂಘ ಸಂಸ್ಥೆಗಳಲ್ಲಿ ಕನಿಷ್ಠ ಒಂದು ವರ್ಷವಾದರೂ ಸೇವೆ ಸಲ್ಲಿಸಿರಬೇಕು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಇಂತಹ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು. ತರಬೇತಿಯಲ್ಲಿ ಸಂಘ, ಸಂಸ್ಥೆಗಳಿಂದ ಬರುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.400 ಶಿಷ್ಯವೇತನ ನೀಡಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ 6 ತಿಂಗಳ ವಿಶೇಷ ‘ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್’ ತರಬೇತಿ ನೀಡಲಾಗುವುದು.  ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ 16 ವರ್ಷಗಳಾಗಿರಬೇಕು ಗರಿಷ್ಠ 30 ವರ್ಷಗಳು ಮೀರಿರಬಾರದು. ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಿಂದ ತರಿಸಿಕೊಳ್ಳಲಾಗುವುದು ಮತ್ತು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಅಥವಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ಅರ್ಜಿಗಳನ್ನು ಜುಲೈ 2021ರ ಒಳಗಾಗಿ ಸಲ್ಲಿಸಬಹುದು. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.500 ಶಿಷ್ಯವೇತನವನ್ನು ನೀಡಲಾಗುವುದು.

ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ.100 ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಚಿಸುವರು ರೂ.125 ಗಳ ಡಿ.ಡಿ ಮೂಲಕ ಪಾವತಿಸಿ ಪಡೆಯಬಹುದಾಗಿದೆ.

ತರಬೇತಿಗೆ ಅರ್ಜಿಯನ್ನು ಜುಲೈ ತಿಂಗಳ ಒಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಆಯಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!