ದೊಡ್ಡಬಳ್ಳಾಪುರ: ತಾಲೂಕಿನ ನಾಡ ಕಚೇರಿಗಳಲ್ಲಿ ಶಾಶ್ವತ ಆಧಾರ್ ನೋಂದಣಿ ಕೇಂದ್ರವನ್ನು ಶೀಘ್ರದಲ್ಲಿಯೇ ತೆರೆಯಲಾಗುವುದೆಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಪ್ರಸ್ತುತ ತಾಲೂಕಿನಲ್ಲಿ ನಗರ ಹಾಗೂ ಮಧುರೆಯಲ್ಲಿ ಆಧಾರ್ ಕೇಂದ್ರ ಕಾರ್ಯ ನಿರ್ವಹಿಸುತ್ತಿವೆ. ಕೆಲವೆ ದಿನಗಳಲ್ಲಿ ಹೋಬಳಿ ಕೇಂದ್ರದಲ್ಲಿರುವ ನಾಡ ಕಚೇರಿಗಳಲ್ಲಿ ಆಧಾರ್ ಕೇಂದ್ರ ತೆರೆಯಲು ಸಿದ್ದತೆ ಕೈಗೊಳ್ಳಲಾಗಿದೆ.
ಈಗಾಗಲೇ ನಾಡ ಕಚೇರಿ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು, ನಾಡ ಕಚೇರಿಗಳಲ್ಲಿ ಆಧಾರ್ ಕೇಂದ್ರ ತೆರೆಯುವ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ಪೂರ್ಣಗೊಂಡಿದೆ.
ನಾಡ ಕಚೇರಿಯಲ್ಲಿ ಆಧಾರ್ ಕೇಂದ್ರ ತೆರೆಯುವುದರಿಂದ ಜನದಟ್ಟಣೆ ಕಡಿಮೆ ಮಾಡಬಹುದು ಹಾಗೂ ಆಧಾರ್ ನೊಂದಣಿ ಗಾಗಿ ದೂರ ದೂರದ ಪ್ರದೇಶಕ್ಕೆ ತೆರಳಬೇಕಾದ ಅನಿರ್ವಾರ್ಯತೆ ಎದುರಿಸುತ್ತಿದ್ದ ಸಾರ್ವಜನಿಕರಿಗೂ ಅನುಕೂಲವಾಗಲಿದೆ.
ನೂತನ ಆಧಾರ್ ನೊಂದಣಿ, ತಿದ್ದುಪಡಿ, ಪ್ರಿಂಟ್ ಸೇರಿದಂತೆ ಆಧಾರ್ ಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳನ್ನು ನಾಡಕಚೇರಿಯಲ್ಲಿಯೇ ಮಾಡಲಾಗುವುದು, ಈ ನಿಟ್ಟಿನಲ್ಲಿ ನಾಡ ಕಚೇರಿಯಲ್ಲಿ ಆಧಾರ್ ಕಾರ್ಯಕ್ಕೆ ನಿರ್ದಿಷ್ಟವಾದ ಸಮಯ ನಿಗದಿ ಪಡಿಸಲು ಚರ್ಚೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾರ್ ಶಿವರಾಜ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….