ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 2022ರ ಸಾಲಿನಲ್ಲಿ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳಿಗೆ ಜನರೇ ತಮ್ಮ ನಡುವಿನ ಸಾಧಕರನ್ನು, ಪ್ರತಿಭಾವಂತರ ಹೆಸರನ್ನು ಶಿಫಾರಸು ಮಾಡಬಹುದು ಎಂದು ಮನವಿ ಮಾಡಿದ್ದರು.
ಈ ಮನವಿಯ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ‘#PeoplesPadma’ ಹ್ಯಾಷ್‍ಟ್ಯಾಗ್‍ನಲ್ಲಿ ಅಭಿಯಾನವೊಂದು ಆರಂಭವಾಗಿದ್ದು, ಇದಕ್ಕೆ ಕನ್ನಡ ಖ್ಯಾತ ನಟ ಅನಂತ್ ನಾಗ್ ಅವರಿಗೆ ಈ ವರ್ಷದ ಪದ್ಮ ಪ್ರಶಸ್ತಿಯನ್ನು ನೀಡಬೇಕೆಂದು ಅಭಿಯಾನ ಪ್ರಾರಂಭವಾಗಿದೆ. #AnanthnagforPadma ಎಂಬ ಹ್ಯಾಷ್‍ಟ್ಯಾಗ್‍ನಡಿ ಅಭಿಯಾನ ಪ್ರಾರಂಭವಾಗಿದೆ.
ಚಿತ್ರರಂಗದ ಮಹನ್ ಪ್ರತಿಭೆಗಳಲ್ಲೊಬ್ಬರಾದ ಅನಂತ್ ನಾಗ್ ಅವರು ಕನ್ನಡ ಭಾಷೆಗೆ, ನಾಡಿಗೆ, ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕೇಳೋಣ. ನಮ್ಮ ನಾಡಿನ ಪರವಾಗಿ ಅನಂತ್ ನಾಗ್ ಅವರನ್ನು #PeoplesPadma ಪ್ರಶಸ್ತಿಗೆ ಹೆಸರನ್ನು ಸೂಚಿಸಿ ಎಂದು ನಟ, ನಿರ್ದೇಶಕ ರಿಷಭ್ ಶೆಟ್ಟಿ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….