ದೊಡ್ಡಬಳ್ಳಾಪುರ: ಕೋವಿಡ್ ಸೋಂಕಿನ ಹಿನ್ನೆಲೆ ಮುಂದೂಡಲಾಗಿದ್ದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ದಿನಾಂಕ ನಿಗದಿ ಪಡಿಸಲಾಗಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿ ಇಲಾಖೆ ವತಿಯಿಂದ ನಡೆಯುವ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನ ತಾಲೂಕಿನ ಘಾಟಿ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 13 ಮತ್ತು ಸೆಪ್ಟೆಂಬರ್ 13ರಂದು ನಡೆಸಲಾಗುತ್ತಿದ್ದು, ಅರ್ಹ ವಧು-ವರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಬಡವರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದೆ.
ಸಪ್ತಪದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ ರೂ.5 ಸಾವಿರ ವಧುವಿಗೆ ರೂ.10 ಸಾವಿರ ಮತ್ತು ವಧುಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಸೇರಿ ಒಟ್ಟು ರೂ.55 ಸಾವಿರ ವೆಚ್ಚ ಮಾಡಲಾಗುತ್ತದೆ.
ಆಸಕ್ತ ಅರ್ಹ ವಧು-ವರರು ಅರ್ಜಿಯನ್ನು ಘಾಟಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಕಾರ್ಯನಿರ್ವಾಹ ಅಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಲು ಆಗಸ್ಟ್ 1 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ: 9590300410, 9241297450, 9945366327 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..