ಬೆಂ.ಗ್ರಾ.ಜಿಲ್ಲೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ಕುಮಾರ್ ಜುಲೈ 17 ರಂದು ತಾಲ್ಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 17 ರಂದು ಮಧ್ಯಾಹ್ನ 12:00 ಗಂಟೆಗೆ, ಸಚಿವರು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಗೆ ಆಗಮಿಸಿ, ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರಗಳಾದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢಶಾಲೆ ಶಾಲೆ, ದೊಡ್ಡಬಳ್ಳಾಪುರದ ನಳಂದ ಪ್ರೌಢಶಾಲೆ, ಕೊಂಗಾಡಿಯಪ್ಪ ಪ್ರೌಢಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಂತರ ಮಧ್ಯಾಹ್ನ 02:00 ಗಂಟೆಗೆ ದೇವನಹಳ್ಳಿ ಮಾರ್ಗವಾಗಿ ರಸ್ತೆ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಚಿದಂಬರ.ಪಿ.ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..