ಬಡವರ ಕಷ್ಟಕ್ಕೆ ನೆರವಾಗಲು ಮೋದಿಗಿರುವ 56 ಇಂಚಿನ ಎದೆ ಇದ್ದರೆ ಸಾಲದು, ಮಾತೃ ಹೃದಯ ಇರಬೇಕು: ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ಕರೊನಾ ಸಂದರ್ಭದಲ್ಲಿ ಬಡ ಜನರಿಗೆ ನೆರವಾಗಲು ಮೋದಿಗಿರುವಂತೆ 56 ಇಂಚಿನ ಎದೆ ಇದ್ದರೆ ಸಾಲದು, ಆ ಎದೆಯಲ್ಲಿ ಮಾತೃ ಹೃದಯ ಇರಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕೋವಿಡ್ ಎರಡನೇ ಅಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜನಪರ ಕಾಳಜಿ ಉಳ್ಳ ವ್ಯಕ್ತಿ ವೆಂಕಟರಮಣಯ್ಯ ಶಾಸಕರಾಗಿ ದೊಡ್ಡಬಳ್ಳಾಪುರಕ್ಕೆ ದೊರೆತಿರುವುದು ತಾಲೂಕಿನ‌ ಜನರ ಅದೃಷ್ಟ. ಕಷ್ಟ ಕಾಲದಲ್ಲಿ ಎಲ್ಲರಿಗೂ ನೆರವು ನೀಡುವ ಮನಸ್ಸು ಇರುವುದಿಲ್ಲ. ಆದರೆ ವೆಂಕಟರಮಣಯ್ಯ ತಾಲೂಕಿನ‌ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದು, ನಿರಂತರ ಮೂವತ್ತು ದಿನಗಳ ಕಾಲ ಅನ್ನ ದಾಸೋಹ ನಡೆಸಿ ಹಸಿದವರಿಗೆ ಅನ್ನ ನೀಡಿದ್ದು ಶ್ಲಾಘನೀಯ ಕಾರ್ಯವಾಗಿದೆ.

ಕರೊನಾ ಇಡೀ ವಿಶ್ವವನ್ನೆ ಕಾಡಿದ ಮಾರಿಯಾಗಿದೆ, ಜನರ ಕಷ್ಟದಲ್ಲಿ ನೆರವಾಗುವಂತೆ ರಾಜ್ಯ ಕಾಂಗ್ರೆಸ್ ಪಕ್ಷದ ಹಾಲಿ ಮಾಜಿ ಶಾಸಕರು, ಸಂಸದರಿಗೆ ಸೂಚನೆ ನೀಡಿದ್ದು ಅವರು ಸಹ ಬಡವರಿಗೆ‌ ನೆರವು ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ವೆಂಕಟರಮಣಯ್ಯ ದಿನಸಿ ಕಿಟ್ ವಿತರಿಸುತ್ತಿದ್ದಾರೆ ಇದು ಇವರು ಮಾಡಬೇಕಾದ ಕೆಲಸವಲ್ಲ, ಲಾಕ್‍ಡೌನ್ ಮಾಡಿದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಸಲಹೆ ನೀಡಿದೆ ಚಾಲಕರು, ಕಾರ್ಮಿಕರು, ರೈತರೂ ಸೇರಿದಂತೆ ಎಲ್ಲರಿಗೂ 10 ಸಾವಿರ ಹಣ, 10 ಕೆಜಿ ಅಕ್ಕಿ ನೀಡುವಂತೆ ಸಲಹೆ ನೀಡಿದೆ ಆದರೆ ಕೇಳಲಿಲ್ಲ.

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಜನರ ಕಷ್ಟ ಅರಿವಾಗುತ್ತಿಲ್ಲ. ಪೆಟ್ರೋಲ್ ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ ಬೆಲೆ ಏರಿಕೆ ಯಾರ ಕಾಲದಲ್ಲಿ ಇಷ್ಟು ಆಗಿರಲ್ಲಿಲ್ಲ ಆದರೆ ಮೋದಿ ಸರ್ಕಾರ ಕಾರಣ, ಬರೀ ಸುಳ್ಳು ಹೇಳುತ್ತಾ ಜನರ ಜೀವನ ಹಾಳು ಮಾಡಿದ್ದಾರೆ. ಕೋವಿಡ್ ಲಸಿಕೆ ಸುಳ್ಳು ಹೇಳುತ್ತಿದ್ದಾರೆ. ಕರೊನಾಗೆ ಮದ್ದು ವ್ಯಾಕ್ಸಿನ್ ಆಗಿದ್ದು ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ  ಮತ್ತೆ ಅಧಿಕಾರಕ್ಕೆ ಬರಲಿದ್ದು, 10 ಕೆಜಿ ಅಕ್ಕಿ ನೀಡುವ ಮೂಲಕ ಬಡವರ ಹಸಿವನ್ನು ನೀಗಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಾಜಿ‌ ಸಂಸದ ಎಂ.ವೀರಪ್ಪಮೋಯ್ಲಿ, ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಸುಮಾರು ಒಂದು ಸಾವಿರ ಕಿಟ್ ವಿತರಿಸಲಾಯಿತು. ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್ ತೊರೆದು ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.

ವಿಧಾನಪರಿಷತ್ ಸದಸ್ಯ ರವಿ, ಶಾಸಕ ಬೈರತಿ ಸುರೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಬಮೂಲ್ ನಿರ್ದೇಶಕ ಬಿ.ಸಿ.ಆನಂದ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪರ ಬಿ.ಮುನೇಗೌಡ ಭರ್ಜರಿ ಪ್ರಚಾರ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ ಕಣದಲ್ಲಿ ಸೋಮವಾರದಿಂದ ಜೆಡಿಎಸ್ (JDS) ಅಭ್ಯರ್ಥಿಗಳ ಪರವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಮತಯಾಚನೆಗೆ ಚಾಲನೆ ನೀಡಿದ್ದಾರೆ.

[ccc_my_favorite_select_button post_id="117387"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಕಬ್ಬಡಿ ಚಾಂಪಿಯನ್ ಶಿಪ್; ಕರ್ನಾಟಕಕ್ಕೆ ಕಂಚಿನ ಪದಕ.. ದೊಡ್ಡಬಳ್ಳಾಪುರದ ಹರೀಶ್ ಭಾಗಿ

ಅಮೆಚೂರ್ ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಮಹಾರಾಷ್ಟ್ರದ ಜಾಲ್ಗೊಂನ್ ನಲ್ಲಿ ನಡೆದ 5ನೇ ಫೆಡರೇಶನ್ ಕಪ್ ನ್ಯಾಷನಲ್ ಕಬ್ಬಡಿ ಚಾಂಪಿಯನ್ ಶಿಪ್ ನಲ್ಲಿ (Kabbadi Championship) ಭಾಗವಹಿಸಿದ ಕರ್ನಾಟಕದ ಕಬ್ಬಡಿ ತಂಡ ಕಂಚಿನ

[ccc_my_favorite_select_button post_id="117398"]
ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ದೊಡ್ಡಬಳ್ಳಾಪುರ: ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಮತ್ತೆ ಕಳ್ಳತನ..! CCTV Video ನೋಡಿ

ಘಾಟಿ ಸುಬ್ರಹ್ಮಣ್ಯ ರಸ್ತೆಯಲ್ಲಿನ ಹಾಡೋನಹಳ್ಳಿಯ ಚೌಡೇಶ್ವರಿ ದೇವಸ್ಥಾನದಲ್ಲಿ (Chowdeshwari Temple) ಮತ್ತೆ ಕಳ್ಳತನ ಪ್ರಕರಣ ನಡೆದಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

[ccc_my_favorite_select_button post_id="117382"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]