ದೊಡ್ಡಬಳ್ಳಾಪುರ: ಜೆಡಿಎಸ್ ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಹೆಚ್.ವಿ.ಅಖಿಲೇಶ್ ಜೆಡಿಎಸ್ ತೊರೆದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಿಟ್ ವಿತರಣೆ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕೈ ಹಿಡಿದ ಅವರು, ಹರಿತಲೇಖನಿಯೊಂದಿಗೆ ಮಾತನಾಡಿ ಶಾಸಕ ಟಿ.ವೆಂಕಟರಮಣಯ್ಯ ಅವರು ತಾಲೂಕಿನಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ ಎಂದರು.
ದೇವಾಂಗ ಮಂಡಳಿಯ ಖಾಜಾಂಚಿಯಾಗಿರುವ ಅಖಿಲೇಶ್, ಸುಮಾರು 17 ವರ್ಷಗಳ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..