ಬೆಂಗಳೂರು: ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿರುವ ಜವಾಹರ ನವೋದಯ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ಸಲೀಂ 2020ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ ಎರಡನೇ ಸುತ್ತಿನ ಎನ್‍ಟಿಎಸ್‍ಸಿ (National Talent Search Exam) ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾನೆ.
ಇದರಿಂದಾಗಿ ಸಲೀಂ ತನ್ನ ಸಂಪೂರ್ಣ ಶಿಕ್ಷಣ ಪಡೆಯುವವರೆಗೆ ಭಾರತ ಸರ್ಕಾರದಿಂದ ಸ್ಕಾಲರ್ ಶಿಪ್ ಪಡೆಯಲು ಅರ್ಹನಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈತನೊಬ್ಬನೇ ಎರಡನೇ ಹಂತದಲ್ಲಿ ಉತ್ತೀರ್ಣನಾಗಿರುವುದು ವಿಶೇಷ ಸಂಗತಿಯಾಗಿದೆ.
ಈ ವಿಶೇಷ ಸಾಧನೆಗೈದ ವಿದ್ಯಾರ್ಥಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಜಗದೀಶ ನಾಯಕ್, ವಿದ್ಯಾಲಯದ ಪ್ರಾಂಶುಪಾಲರಾದ ಆರ್.ಚಕ್ರವರ್ತಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಚಕ್ರವರ್ತಿ, ವಿದ್ಯಾರ್ಥಿ ಸಲೀಂ ಸಾಧನೆ ನಮ್ಮ ವಿದ್ಯಾಲಯಕ್ಕೆ ಮತ್ತು ಜಿಲ್ಲೆಗೆ ಹೆಮ್ಮೆ ಮತ್ತು ಕೀರ್ತಿ ತರುವ ಅಪರೂಪದ ಸಂಗತಿ ಎಂದು ತಿಳಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..