ದೊಡ್ಡಬಳ್ಳಾಪುರ: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದೊಡ್ಡಬಳ್ಳಾಪುರದ ಶ್ರೀವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಜಿಲ್ಲೆಗೆ ಮೊದಲ ಸ್ಥಾನಗಳಿಸಿದ್ದಾರೆ.
ಕರೊನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ನೀಡಲಾಗಿದೆ.
ಇದರ ಅನ್ವಯ ಶೇ.100 ರಷ್ಟು ಫಲಿತಾಂಶವನ್ನು ಶ್ರೀವಾಣಿ ಪದವಿ ಪೂರ್ವ ಕಾಲೇಜಿಗೆ ದೊರೆತಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ನಾಲ್ಕು ವಿದ್ಯಾರ್ಥಿಗಳಾದ ಕುಸುಮ.ಎನ್, ಲಿಖಿತ ಆರ್.ವಿ, ಪ್ರೀತಿ ಎಂ.ಎಸ್, ವತ್ಸಲ.ಎಸ್ 600/600 ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ್ದಾರೆ.
ಒಟ್ಟಾರೆ 177 ವಿದ್ಯಾರ್ಥಿಗಳ ಪೈಕಿ 70 ಡಿಸ್ಟಿಂಕ್ಷನ್, 104 ಪ್ರಥಮ ದರ್ಜೆ, 03 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಾಂಶುಪಾಲರಾದ ಬಿ.ಆರ್. ವೇಣುಗೋಪಾಲ್ ತಿಳಿಸಿದ್ದಾರೆ.
ಜಿಲ್ಲೆಗೆ ಮೊದಲ ಸ್ಥಾನ ದೊರಕಿಸಿ, ಶ್ರೀವಾಣಿ ಪದವಿ ಪೂರ್ವ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..