ವಿಶ್ವ ಪಾರಂಪರಿಕ ತಾಣವಾಗಿ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು ಅಭಿವೃದ್ಧಿ

ರಾಮನಗರ: ಆದಿಚುಂಚಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಹುಟ್ಟೂರು ಬಾನಂದೂರು ಗ್ರಾಮವನ್ನು ವಿಶ್ವದರ್ಜೆಯ ಪಾರಂಪರಿಕ ತಾಣವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಚಾಲನೆ ನೀಡಲಾಯಿತು. 

ಬಾನಂದೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಅರಣ್ಯ ಮತ್ತು ಕನ್ನಡ-ಸಂಸ್ಕೃತಿ ಖಾತೆ ಸಚಿವ ಅರವಿಂದ ಲಿಂಬಾವಳಿ ಅವರು ಯೋಜನೆಗೆ ಭೂಮಿಪೂಜೆ ನೆರೆವೇರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು, “ಈ ಯೋಜನೆಯನ್ನು ಕಾರ್ಯಗತ ಮಾಡಲಿರುವ ಖಾಸಗಿ ಸಂಸ್ಥೆಯು 125 ಕೋಟಿ ರೂ. ವೆಚ್ಚದ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಿದೆ.‌ ಸರಕಾರ 2019-20ನೇ ಸಾಲಿನ ಮುಂಗಡ ಪತ್ರದಲ್ಲಿ ಈ ಯೋಜನೆಯನ್ನು ಘೋಷಿಸಿ 25 ಕೋಟಿ ರೂ. ಅನುದಾನವನ್ನೂ ನೀಡಿದೆ. ಸರಕಾರವೂ ಸೇರಿ ಎಲ್ಲರ ಸಹಕಾರದೊಂದಿಗೆ ಇಡೀ ಯೋಜನೆಯನ್ನು ಕಾರ್ಯಗತ ಮಾಡಲಾಗುವುದು” ಎಂದರು. 

ಆಸ್ಪತ್ರೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಅಧ್ಯಯನ ಕೇಂದ್ರ, ಗೋಶಾಲೆ, ವಸ್ತು ಸಂಗ್ರಹಾಲಯ, ಗ್ರಂಥಾಲಯ ನಿರ್ಮಾಣ ಸೇರಿ ಹತ್ತು ಹಲವು ಯೋಜನೆಯಲ್ಲಿ ಅಡಕವಾಗಿದ್ದು, ಅತ್ಯಂತ ವೇಗವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದರು ಡಿಸಿಎಂ. 

ಸಚಿವರಾದ ಅರವಿಂದ ಲಿಂಬಾವಳಿ ಮಾತನಾಡಿ, “ಜ್ಞಾನಕ್ಕೆ ಅತಿಹೆಚ್ಚು ಮಹತ್ವ ನೀಡುತ್ತಿದ್ದ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರು, ಹಳ್ಳಿಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಅವರ ಆಶಯಗಳು ನಮ್ಮನ್ನು ಮುನ್ನಡೆಸುತ್ತಿದ್ದು, ಸಶಕ್ತ ಸಮಾಜ ನಿರ್ಮಾಣಕ್ಕೆ ಶ್ರೀಗಳಲ್ಲಿದ್ದ ಪರಿಕಲ್ಪನೆಗಳೆಲ್ಲ ಇಲ್ಲಿ ಸಾಕಾರವಾಗಲಿವೆ” ಎಂದರು. 

ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, “ಈ ಯೋಜನೆ ಗುರುಗಳ ಅನುಗ್ರಹದೊಂದಿಗೆ ನಿರ್ವಿಘ್ನವಾಗಿ ಸಂಪನ್ನವಾಗಲಿ” ಎಂದು ನುಡಿದರು.  

ರಾಮನಗರದ ಆದಿಚುಂಚನಗಿರಿ ಶಾಖಾ ಮಠದ ಶ್ರಿ ಅನ್ನದಾನೇಶ್ವರ ಸ್ವಾಮೀಜಿಗಳು,  ಶಾಸಕರಾದ ಮಂಜುನಾಥ್‌, ಸಿ.ಎಂ.ಲಿಂಗಪ್ಪ, ಎಸ್.‌ರವಿ, ಅ.ದೇವೇಗೌಡ, ಜಿಲ್ಲಾಧಿಕಾರಿ ರಾಕೇಶ್‌, ಜಿಪಂ ಸಿಇಒ ಇಕ್ರಂ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಶ್ರೀಗಳ ಮಾತಾ ಪಿತೃಗಳ ಗದ್ದುಗೆಗೆ ಪೂಜೆ: ಕಾರ್ಯಕ್ರಮಕ್ಕೂ ಮೊದಲು ಉಪ ಮುಖ್ಯಮಂತ್ರಿಗಳು, ಶ್ರೀಗಳ ಜತೆಯಲ್ಲಿ ಶ್ರೀ ಬಾಲಗಂಗಾಧರ ನಾಥ ಮಹಾಸ್ವಾಮೀಜಿ ಅವರ ಪೂರ್ವಾಶ್ರಮ ಜನ್ಮಧಾತರಾದ ಶ್ರೀಮತಿ ಬೋರಮ್ಮ ಮತ್ತು ಶ್ರಿ ಚಿಕ್ಕಲಿಂಗಪ್ಪ ಅವರ ಗದ್ದುಗೆಗೆ ಪೂಜೆ ನೆರೆವೇರಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರಿನಲ್ಲಿ ಶಾಶ್ವತ ಹೆಜ್ಜೆಗುರುತು ಬಿಟ್ಟು ಹೋಗುವ ಆಸೆ ನನ್ನದು : ಡಿಸಿಎಂ ಡಿ.ಕೆ.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ನನ್ನ ಕೆಲಸಗಳ ಮೂಲಕ ನನ್ನ ಹೆಸರು ಶಾಶ್ವತವಾಗಿ ಉಳಿಯಬೇಕು, ಶಾಶ್ವತ ಹೆಜ್ಜೆ ಗುರುತು ಬಿಟ್ಟು ಹೋಗುವ ಆಸೆ ನನಗೆ ಇದೆ: D.K. Shivakumar

[ccc_my_favorite_select_button post_id="117318"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಗಿಳಿ ರಕ್ಷಣೆಗೆ ಹೋದ ಯುವಕ ಹೈಟೆನ್ಸನ್ ವೈರ್‌ ತಗುಲಿ ದುರ್ಮರಣ

ಗಿಳಿ ರಕ್ಷಣೆಗೆ ಹೋದ ಯುವಕ ಹೈಟೆನ್ಸನ್ ವೈರ್‌ ತಗುಲಿ ದುರ್ಮರಣ

ಗಿಳಿ (Parrot) ರಕ್ಷಿಸಲು ಹೋದ ಯುವಕನೋರ್ವ ಹೈಟೆನ್ಸನ್ ವೈ‌ರ್ ಕಂಬದ ಕರೆಂಟ್ ಶಾಕ್ ತಗುಲಿ (high-voltage wire) ಸಾವನ್ನಪ್ಪಿರುವ ಘಟನೆ ಗಿರಿನಗರದ ಅಪಾರ್ಟ್‌ಮೆಂಟ್ ಬಳಿ ನಡೆದಿದೆ.

[ccc_my_favorite_select_button post_id="117316"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]