ದೊಡ್ಡಬಳ್ಳಾಪುರ: ಕೃಷಿ ಇಲಾಖೆಯಿಂದ 2021-21ನೇ ಸಾಲಿನ ಆತ್ಮ ಯೋಜನೆಯಡಿ ನೀಡುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಸಮಗ್ರ ಕೃಷಿ, ಸಾವಯವ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಮತ್ತು ರೇಷ್ಮೇ ವಿಭಾಗದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ನೂತನ ತಾಂತ್ರಿಕತೆಗಳನ್ನು ಕೃಷಿಯಲ್ಲಿ ಅಳವಡಿಸಿಕೊಂಡಿರುವ ರೈತರು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ರೈತರು ಕೃಷಿ ಇಲಾಖೆಯ ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಅಧಿಕಾರಿಗಳನ್ನು, ಅಥವಾ ದೊಡ್ಡಬಳ್ಳಾಪುರ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿನ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರನ್ನು ಸಂಪರ್ಕಿಸಿ, ನಿಗದಿತ ಅರ್ಜಿ ನಮೂನೆ ಹಾಗೂ ವಿವರವಾದ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ರೈತರು ಸ್ಪರ್ಧೆಗೆ ಭಾಗವಹಿಸಲು ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕಾಗಿರುತ್ತದೆ.
ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಜಾತಿ ಪ್ರಮಾಣ ಪತ್ರ (ಪ.ಜಾ/ಪ.ಪಂ) ಮತ್ತು ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿರುವ ಛಾಯಾ ಚಿತ್ರಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ. ‘ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಕೊನೆಯ ಜುಲೈ.30 ಆಗಿರುತ್ತದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಆದುದರಿಂದ, ಹೆಚ್ಚಿನ ಸಂಖ್ಯೆಯಲ್ಲಿ ರೈತ ಭಾಂದವರು ಸ್ಪರ್ಧೆಯಲ್ಲಿ ಭಾಗವಹಿಸಲು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ ಮನವಿ ಮಾಡಿರುತ್ತಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..