ದೊಡ್ಡಬಳ್ಳಾಪುರ: ತಾಲೂಕಿನ ಮಜರಾಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ / ಉಪಾಧ್ಯಕ್ಷ ಸ್ಥಾನಕ್ಕೆ ಜುಲೈ.30 ರಂದು ಚುನಾವಣೆ ನಿಗದಿ ಪಡಿಸಲಾಗಿದೆ ಎಂದು ಪಿಡಿಒ ಪ್ರಕಾಶ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ಗ್ರಾಮಪಂಚಾಯಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಬೇಕಿದೆ.
ಈ ನಿಟ್ಟಿನಲ್ಲಿ ಜುಲೈ 30 ರಂದು ಸರ್ವ ಸದಸ್ಯರ ಸಭೆ ಕರೆಯಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ (ಮಹಿಳೆ) ಮೀಸಲಾತಿ ಅಡಿಯಲ್ಲಿ. ಸದಸ್ಯರ ಅಭಿಪ್ರಾಯದಂತೆ ಚುನಾವಣೆ ಅಥವಾ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.
ಜುಲೈ.30 ರಂದು ನಾಮಪತ್ರ ಸಲ್ಲಿಕೆ 11ಗಂಟೆಯ ವರೆಗೂ ಅವಕಾಶ, 11.15ರ ವರೆಗೆ ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು 11.30ರವರೆ ಸಮಯ, ಅಗತ್ಯವಾದಲ್ಲಿ 12 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಕಾಶ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..