
ಹಾಸನ: ಹಾಸನ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವೆ ರಾಷ್ಟ್ರೀಯ ಹೆದ್ದಾರಿ ಎನ್ ಹೆಚ್.75 ರಲ್ಲಿ ಸಕಲೇಶಪುರ ಸಮೀಪದ ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದೆ.
ಕುಸಿತ ತೆಡೆದು ಸಂಚಾರ ಮಾರ್ಗವನ್ನು ತುರ್ತಾಗಿ ದುರಸ್ತಿ ಪಡಿಸುವಂತೆ ಜಿಲ್ಲಾಧಿಕಾರಿ ಆರ್ ಗಿರಿಶ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಹಶಿಲ್ದಾರ್ ಜಯಕುಮಾರ್ ಸೇರಿದಂತೆ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ್ದು ತಕ್ಕಣದ ಪರಿಹಾರ ಕಾರ್ಯಗಳಿಗೆ ಕ್ರಮವಹಿಸಿದ್ದಾರೆ.
ದುರಸ್ತಿ ಉದ್ದೇಶಗಳಿಂದ ರಸ್ತೆ ಮಾರ್ಗ ತಾತ್ಕಾಲಿಕ ಬಂದ್ ಆಗಲಿದ್ದು ಪ್ರಯಾಣಿಕರು ಬದಲಿ ಮಾರ್ಗದಲ್ಲಿ ತೆರಳುವಂತೆ ಕೋರಲಾಗಿದೆ
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಮೂಲಕ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..