ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನಲ್ಲಿ ಶನಿವಾರ ಗಿರಿ ಪ್ರದಕ್ಷಿಣೆ ನಡೆಯಿತು.
ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ಬೆಟ್ಟದ ತಪ್ಪಲಿನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರದಕ್ಷಿಣೆ ಆರಂಭವಾಗಿ, ಸುಮಾರು 8 ಕಿ.ಮೀ ಸುತ್ತಳತೆಯ ಬೆಟ್ಟವನ್ನು ಸುತ್ತಿದ ಭಕ್ತಾಧಿಗಳು ಬೆಳಿಗ್ಗೆ ಪ್ರದಕ್ಷಿಣೆ ಆರಂಭವಾದ ಸ್ಥಳದಲ್ಲೇ ಮತ್ತೆ ಮಧ್ಯಾಹ್ನ ದೇವಾಲಯದಲ್ಲಿ ಮಹಾಮಂಗಳಾರತಿ ಸಲ್ಲಿಸುವ ಮೂಲಕ ಮುಕ್ತಾಯವಾಯಿತು.
ಗಿರಿ ಪ್ರದಕ್ಷಿಣೆಯಲ್ಲಿ ಭಾಗವಹಿಸಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..