ನೀಟ್ ಮತ್ತು ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆ ರದ್ದಿಲ್ಲ: ಕೇಂದ್ರ ಸರ್ಕಾರದ ಸ್ಪಷ್ಟನೆ

ನವದೆಹಲಿ: ನೀಟ್ ಮತ್ತು ಇತರೆ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ರದ್ದು ಮಾಡುವ ಯಾವುದೇ ಚಿಂತನೆ ಕೇಂದ್ರ ಸರ್ಕಾರದ ಮುಂದಿಲ್ಲ. ನೀಟ್-(ಸ್ನಾತಕ-ಪಿಜಿ) ಮತ್ತು ನೀಟ್-(ಸ್ನಾತಕಪೂರ್ವ(ಪದವಿ)-ಯುಜಿ) 2021 ಪರೀಕ್ಷೆಗಳು ನಿಗದಿಯಂತೆ ಕ್ರಮವಾಗಿ 11 ಸೆಪ್ಟೆಂಬರ್ 2021 ಮತ್ತು 12 ಸೆಪ್ಟೆಂಬರ್ 2021ರಂದು ಜರುಗಲಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್  ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ವಿಷಯ ದೃಢಪಡಿಸಿದ್ದಾರೆ.

ಕೋವಿಡ್ ಸೂಕ್ತ ನಡವಳಿಕೆ ಕಾಪಾಡುವುದು ಸೇರಿದಂತೆ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಿ ಮತ್ತು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪರೀಕ್ಷೆ ಆಯೋಜಿಸಲಾಗುವುದು. ಜತೆಗೆ, ಅಭ್ಯರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಗೆ ಹೆಚ್ಚುವರಿ ಸಂರಕ್ಷಣಾ ಕ್ರಮಗಳನ್ನು ಕೈಗೊಂಡು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದೆ.

ವಿದ್ಯಾರ್ಥಿಗಳು ಗುಂಪುಗೂಡುವುದನ್ನು ನಿಯಂತ್ರಿಸಲು ಮತ್ತು ದೂರದ ಪ್ರಯಾಣ ನಿಯಂತ್ರಿಸಲು ದೇಶಾದ್ಯಂತ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ.

ಅಭ್ಯರ್ಥಿಗಳಿಗೆ ಹೊರಡಿಸುವ ಪ್ರವೇಶ ಚೀಟಿ(ಕಾರ್ಡ್)ಯು ಕೋವಿಡ್ ಇ-ಪಾಸ್ ಹೊಂದಿರುತ್ತದೆ. ಇದು ಅಭ್ಯರ್ಥಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳನ್ನು ಸರಾಗವಾಗಿ ಪ್ರವೇಶಿಸಲು ಮತ್ತು ನಿರ್ಗಮಿಸಲು ಅವಕಾಶ ಕಲ್ಪಿಸಲಾಗುತ್ತದೆ.ಪ್ರವೇಶ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಸಮಗ್ರ ತಪಾಸಣೆ ಮಾಡಲಾಗುತ್ತದೆ. ದೇಹದ ಉಷ್ಣಾಂಶ ಮಾಪನ ಮಾಡಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ಪ್ರಯೋಗಾಲಯಗಳು ಸ್ಥಾಪನೆಯಾಗಿರುತ್ತವೆ.

ಮಾಸ್ಕ್ ಧರಿಸುವುದು ಅಭ್ಯರ್ಥಿಗಳಿಗೆ ಕಡ್ಡಾಯ. ಅವರಿಗೆ ಸಂರಕ್ಷಣಾತ್ಮಕ ಗೇರ್ ಸೇಫ್ಟಿ ಕಿಟ್ ನೀಡಲಾಗುತ್ತದೆ. ಇದರಲ್ಲಿ ಫೇಸ್ ಶೀಲ್ಡ್, ಫೇಸ್ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಸರ್ ಇರುತ್ತವೆ.ಪರೀಕ್ಷಾ ಕೇಂದ್ರಗಳ ಹೊರಗಡೆ ಗುಂಪು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.

ಕಲೆ ಮತ್ತು ವಿಜ್ಞಾನ ವಿಷಯಗಳ ಪರೀಕ್ಷೆಗಳು ಈಗಾಗಲೇ ನಿಗದಿಪಡಿಸಿರುವ ದಿನಗಳಂದು ಆಯಾ ವಿಶ್ವವಿದ್ಯಾಲಯಗಳು ಮತ್ತು ರಾಜ್ಯಗಳ ಚಿಂತನೆ(ಯೋಜನೆ)ಯಂತೆ ನಡೆಯಲಿವೆ ಎಂದವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!