ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಇವರ ಸಹಯೋಗದೊಂದಿಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಭೂ ಮತ್ತು ಜಲ ಸಾಹಸ ತರಬೇತಿ ಶಿಬಿರ 2021-22 ಅನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ದುರ್ಗ ಬೆಟ್ಟದ ಗುಂಡಮಗೆರೆ ಕೆರೆಯಲ್ಲಿಂದು ನಡೆಸಲಾಯಿತು.
ಶಿಬಿರವನ್ನು ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸಲಹೆಗಾರ ಕೀರ್ತಿ ಫಯಾಜ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಿಡಿಪಿಒ ಅನಿತಾಲಕ್ಷ್ಮೀ, ಹಾಗೂ ತಂಡದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..