ಜಪಾನ್: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿರುವ ವೇಟ್ ಲಿಫ್ಟರ್ ಮೀರಾ ಬಾಯಿ ಚಾನು, ತನ್ನ ಈ ಸಾಧನೆಯನ್ನು ದೇಶಕ್ಕೆ ಸಮರ್ಪಿಸಿದ್ದಾರೆ.
ಬೆಳ್ಳಿ ಪದಕ ಗೆದ್ದ ಖುಷಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಚಾನು, ನನ್ನ ಕನಸು ನನಸಾಯಿತು. ಈ ಬೆಳ್ಳಿ ಪದಕವನ್ನು ನನ್ನ ದೇಶಕ್ಕೆ ಅರ್ಪಿಸಲು ಇಷ್ಟಪಡುತ್ತೇನೆ ಎಂದಿದ್ದಾರೆ.
ತನ್ನ ಈ ಸಾಧನೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿರುವ ಚಾನು, ನನ್ನ ಈ ಪಯಣದಲ್ಲಿ ಜೊತೆಯಾಗಿ ನಿಂತ, ನನ್ನ ಗೆಲುವು ಪ್ರಾರ್ಥಿಸಿದ ಭಾರತೀಯರಿಗೆ, ನನಗಾಗಿ ಸಾಕಷ್ಟು ತ್ಯಾಗ ಮಾಡಿ ನನ್ನಲ್ಲಿ ನಂಬಿಕೆ ಇರಿಸಿಕೊಂಡಿರುವ ನನ್ನ ತಾಯಿಗೆ ಧನ್ಯವಾದಗಳು ಎಂದಿದ್ದಾರೆ.
ಇನ್ನು ಜಪಾನ್ ನಲ್ಲಿ ನಡೆಯುತ್ತಿರುವ ಟೋಕಿಯೊ ಒಲಿಂಪಿಕ್ಸ್ ನ ಮೊದಲ ದಿನವೇ ಭಾರತ ಪದಕ ಬಾಚಿಗೊಂಡಿತು. 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಮಿರಾಬಾಯ್ ಚಾನು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..