ಕೃಷಿಯಲ್ಲಿ ಇಸ್ರೇಲ್ ಪದ್ಧತಿ ಬಳಕೆ: ಶೀಘ್ರದಲ್ಲಿ ಇಸ್ರೇಲ್ ಕಾನ್ಸುಲೇಟ್ ಜನರಲ್ ನೇತೃತ್ವದ ತಂಡ ರಾಜ್ಯಕ್ಕೆ ಭೇಟಿ

ಬೆಂಗಳೂರು: ಇಸ್ರೇಲ್ ಮಾದರಿ ಕೃಷಿ ಬಳಕೆ ನಿಟ್ಟಿನಲ್ಲಿ ಇಸ್ರೇಲ್ ದೇಶದ ದಕ್ಷಿಣ ಭಾರತದ ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ತಾವು ಸಂಪರ್ಕಿಸಿದ್ದು, ಶೀಘ್ರದಲ್ಲಿಯೆ ಅವರ ನೇತೃತ್ವದ ತಂಡ ರಾಜ್ಯಕ್ಕೆ ಬಂದು ಅಧ್ಯಯನ ಮಾಡಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್.ನಿರಾಣಿ ಅವರು ತಿಳಿಸಿದರು.

ಶನಿವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿರುವ ಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳು ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಕಲಬುರಗಿ ವಿಜನ್-2050 ಭಾಗವಾಗಿ ಕಲಬುರಗಿ ಜಿಲ್ಲೆಯ ಮಣ್ಣಿನ ಗುಣಮಟ್ಟ, ಇಲ್ಲಿನ ಹವಾಗುಣ ಮತ್ತು ನೀರಿನ ಲಭ್ಯತೆ ಕುರಿತು ಅಧ್ಯಯನ ಮಾಡಿ ಅಗತ್ಯ ಸಲಹೆ ನೀಡಲು ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ಸಂಪರ್ಕಿಸಿದಾಗ ಅವರು ರಾಜ್ಯಕ್ಕೆ ತಾವೇ ಖುದ್ದಾಗಿ ಬರಲು ಉತ್ಸುಕರಾಗಿದ್ದಾರೆ. ಹೀಗಾಗಿ ಅವರ ಪ್ರವಾಸದ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅವರೊಂದಿಗೆ ಸಂಚರಿಸಿ ಅಧ್ಯಯನಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಮುರುಗೇಶ ನಿರಾಣಿ ನಿರ್ದೇಶಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ 2 ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮತ್ತು ನಗರ ಪ್ರದೇಶದಲ್ಲಿ 1 ಲಕ್ಷ ಸೇರಿದಂತೆ ರಾಜ್ಯದಾದ್ಯಂತ ವಿವಿಧ ವಸತಿ ಯೋಜನೆ ಅಡಿಯಲ್ಲಿ 5 ಲಕ್ಷ ಮನೆಗಳನ್ನು ನಿರ್ಮಿಸಿ ಸೂರಿಲ್ಲದವರಿಗೆ ಸೂರು ಕಲ್ಪಿಸುವ ನಿರ್ಧಾರ ಕೈಗೊಂಡಿದೆ ಎಂದರು.

ಆಗಸ್ಟ್‌ನಲ್ಲಿ ವಿಜನ್-2050 ಕಾರ್ಯಾಗಾರ: ಕಲಬುರಗಿ ವಿಜನ್-2050 ಕುರಿತಂತೆ ವಿವಿಧ ಕ್ಷೇತ್ರ ತಜ್ಞರನ್ನು ಆಹ್ವಾನಿಸಿ ಸಲಹೆ ಪಡೆಯಲು ಒಂದು ದಿನದ ಕಾರ್ಯಾಗಾರ ಆಗಸ್ಟ್ ಮಾಹೆಯಲ್ಲಿ ಏರ್ಪಡಿಸಲಾಗುವುದು. ವಿಜನ್ ಡಾಕ್ಯೂಮೆಂಟ್ ಸಿದ್ಧಪಡಿಕೆಗೆ ಗ್ಲೋಬಲ್ ಕನ್ಸಲಟೆಂಟ್ ಗುರುತಿಸಿ ಅವರ ಮುಖೇನ ಡಿ.ಪಿ.ಆರ್. ಸಿದ್ಧಪಡಿಸುವುದು ಮತ್ತು ಅದಕ್ಕನುಗುಣವಾಗಿ ಹಣಕಾಸು ಹೊಂದಾಣಿಕೆಗೂ ಚಿಂತನೆ ನಡೆಸಲಾಗುವುದು ಎಂದರು.

ಕಲಬುರಗಿ ಜಿಲ್ಲೆಯಲ್ಲಿ ಹೂಡಿಕೆ, ರಸ್ತೆ ಸುಧಾರಣೆ, ಉದ್ಯೋಗ ಸೃಷ್ಠಿ, ಶಿಕ್ಷಣ ಕ್ಷೇತ್ರ ಸುಧಾರಣೆ, ಸರಕು ಸಾಗಣಿಕೆಗೆ ಬ್ರಾಡ್ ಗೇಜ್ ರೈಲು ಓಡಾಟ ಹೀಗೆ ನಾನಾ ವಿಷಯಗಳನ್ನು ಹಂತ-ಹಂತವಾಗಿ ಅಭಿವೃದ್ಧಿಗೆ ಪಡಿಸುವ ಗುರಿ ವಿಜನ್-2050 ಹೊಂದಿದೆ ಎಂದು ಕನಸಿನ ಕಲಬುರಗಿ ಕುರಿತು ಸಚಿವ ಮುರುಗೇಶ ನಿರಾಣಿ ವಿವರಿಸಿದರು.

371(ಜೆ) ಲೋಪದೋಷ, ಶೀಘ್ರ ಸಭೆ: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ 371(ಜೆ) ಅನುಷ್ಠಾನದಲ್ಲಿ ಕೆಲವು ಲೋಪದೋಷಗಳಿವೆ. ಇದನ್ನು ಈಗಲೇ ಸರಿಪಡಿಸಬೇಕಾಗುತ್ತದೆ. ವಿಶೇಷವಾಗಿ ಶಿಕ್ಷಕರ ಟಿ.ಇ.ಟಿ ಅರ್ಹತಾ ಪರೀಕ್ಷೆಯಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಗ್ರೇಸ್ ಮಾಕ್ರ್ಸ್ ನೀಡಬೇಕೆಂದು ನಮ್ಮ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಲೋಪದೋಷ ಸರಿಪಡಿಸಲು ಕೂಡಲೆ ಸಭೆ ನಡೆಸಬೇಕೆಂದು  ಎಂ.ಎಲ್.ಸಿ. ಶಶಿಲ್ ನಮೋಶಿ ಸಭೆಯಲ್ಲಿ ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮುರುಗೇಶ ನಿರಾಣಿ ಅವರು ಮೊದಲು ಜಿಲ್ಲಾ ಮಟ್ಟದಲ್ಲಿ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಸಭೆ ಕೈಗೊಂಡು ಎಲ್ಲ ಅಂಶಗಳನ್ನು ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆ ಬಗೆಹರಿಸೋಣ ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಜೂನ್ ಮತ್ತು ಜುಲೈ ಮಾಹೆಯಲ್ಲಿ ವಾಡಿಕೆಗಿಂತ ದುಪ್ಪಟ್ಟು ಮಳೆಯಾಗಿದೆ. ಆದರೆ ಪ್ರವಾಹ ಸ್ಥಿತಿ ಏರ್ಪಟ್ಟಿಲ್ಲ. ಸಾಮಾನ್ಯವಾಗಿ ಪ್ರವಾಹ ಏರ್ಪಡುವ ಪ್ರದೇಶಗಳಾದ 165 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಿ ಸ್ಥಳೀಯ ಯುವಜನರು ಮತ್ತು ಈಜುಗಾರರನ್ನು ಒಳಗೊಂಡಂತೆ 15 ಜನರ  ತಂಡ ರಚಿಸಿ ಅವರಿಗೆ ಪ್ರವಾಹ ಕುರಿತಂತೆ ಅಗತ್ಯ ತರಬೇತಿ ನೀಡಲಾಗಿದೆ. ತಾಲೂಕು ಅಧಿಕಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ. ಬೆಡ್ ಶೀಟ್, ಟವೆಲ್, ಸಾಬೂನು ಮತ್ತು ಅಗತ್ಯ ಪ್ರಮಾಣದ ಉಪಹಾರ ಒಳಗೊಂಡ 200 ಕಿಟ್ ಪ್ರತಿ ತಾಲೂಕಿನಲ್ಲಿ ಸಿದ್ದಪಡಿಸಿಟ್ಟುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಎಲ್ಲಕ್ಕಿಂತಲೂ ಮುಖ್ಯವಾಗಿ ಪ್ರವಾಹ ಏರ್ಪಡುವ ಸ್ಥಳಗಳಲ್ಲಿ ಇರುವ ಗರ್ಭಿಣಿಯರ ಪಟ್ಟಿ ಸಹ ಸಿದ್ಧಪಡಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದ ಅವರು ಪ್ರಸ್ತುತ ಕೋವಿಡ್ ಸ್ಥಿತಿಗತಿ ವಿವರಿಸಿ ಮೂರನೇ ಅಲೆ ಎದುರಿಸಲು ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಪ್ರತಿ ತಾಲೂಕಿನಲ್ಲಿ 500 ಎಲ್.ಪಿ.ಎಂ. ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್ ಸ್ಥಾಪನೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ನನ್ನ 60 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ: ಮಾಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ

[ccc_my_favorite_select_button post_id="120877"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]